ಅಪಘಾತದ ಸ್ಥಳದಲ್ಲಿ ಪೋಲೀಸರಿಂದ ಪರಿಶೀಲನೆ
ರಾಜ್ಯ
ಮಿನಿ ಟ್ರಕ್ ಪಲ್ಟಿ: ಆರು ವರ್ಷದ ಮಗು ಸೇರಿ ಮೂವರು ದುರ್ಮರಣ
ಮಿನಿ ಟ್ರಕ್ ಪಲ್ಟಿಯಾಗಿ ಆರು ವರ್ಷದ ಮಗು ಸೇರಿದಂತೆ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಚಿತ್ರದುರ್ಗ: ಮಿನಿ ಟ್ರಕ್ ಪಲ್ಟಿಯಾಗಿ ಆರು ವರ್ಷದ ಮಗು ಸೇರಿದಂತೆ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಮೃತರನ್ನು ಸೆಲ್ವಿ (35), ದೀಪಿಕಾ (6) ಮತ್ತು ನೀಲಮ್ಮ (29) ಎಂದು ಗುರುತಿಸಲಾಗಿದೆ.
ಮೃತರೆಲ್ಲಾ ಗುತ್ತಿಗೆ ಕಾರ್ಮಿಕರಾಗಿದ್ದು ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅಪಘಾತವಾಗಿದೆ ಎಂದು ಪೋಲೀಸರು ಹೇಳಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ 9 ಜನರನ್ನು ಚಿಕಿತ್ಸೆಗಾಗಿ ಹಿರಿಯೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಸಂಬಂಧ ಹಿರಿಯೂರು ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದಾರೆ.


