1,100 ಸಿಬ್ಬಂದಿಯ ಕಾಲ್ ಸೆಂಟರ್ ನಿಂದ ಕೋವಿಡ್ ರೋಗಿಗಳಿಗೆ ಮಾರ್ಗದರ್ಶನ: ಸಚಿವ ಡಾ.ಕೆ.ಸುಧಾಕರ್

ಮನೆ ಆರೈಕೆಯಲ್ಲಿರುವ ಕೋವಿಡ್ ರೋಗಿಗಳಿಗೆ ಮಾರ್ಗದರ್ಶನ ನೀಡಲು ಕಾಲ್ ಸೆಂಟರ್ ನಲ್ಲಿ ಒಟ್ಟು 1,100 ಮಂದಿಯನ್ನು ನಿಯೋಜಿಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಡಾ ಕೆ ಸುಧಾಕರ್
ಡಾ ಕೆ ಸುಧಾಕರ್
Updated on

ಬೆಂಗಳೂರು: ಮನೆ ಆರೈಕೆಯಲ್ಲಿರುವ ಕೋವಿಡ್ ರೋಗಿಗಳಿಗೆ ಮಾರ್ಗದರ್ಶನ ನೀಡಲು ಕಾಲ್ ಸೆಂಟರ್ ನಲ್ಲಿ ಒಟ್ಟು 1,100 ಮಂದಿಯನ್ನು ನಿಯೋಜಿಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಕೋವಿಡ್ ಟಾಸ್ಕ್ ಫೋರ್ಸ್ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಈಗಾಗಲೇ ಕಾಲ್ ಸೆಂಟರ್ ನಲ್ಲಿ 400 ಸಿಬ್ಬಂದಿ ಇದ್ದಾರೆ. ಮನೆ ಆರೈಕೆಯಲ್ಲಿರುವವರಿಗೆ ಕರೆ ಮಾಡಿ ಮಾರ್ಗದರ್ಶನ ನೀಡಲು 11 ಕೋಟಿ ರೂ. ವೆಚ್ಚದಲ್ಲಿ 6 ತಿಂಗಳಿಗೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ, ಹೊಸ ವ್ಯವಸ್ಥೆ ಮಾಡಲಾಗುವುದು. ಈ ಸಿಬ್ಬಂದಿ ಬೇರೆ ಬೇರೆ ವಿಭಾಗಗಳಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಜೊತೆಗೆ 20 ಕೋಟಿ ರೂ. ವೆಚ್ಚದಲ್ಲಿ ಟೆಲಿ ಮೆಡಿಸಿನ್, ವೈದ್ಯಕೀಯ ಸಲಹೆ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ 2-3 ಸಾವಿರ ಹಾಸಿಗೆಗಳ ಮೇಕ್ ಶಿಫ್ಟ್ ಆಸ್ಪತ್ರೆಯನ್ನು 15-20 ದಿನಗಳಲ್ಲಿ ನಿರ್ಮಿಸಲಾಗುವುದು. ವಿಕ್ಟೋರಿಯಾ, ಬೌರಿಂಗ್, ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆ ಆವರಣದಲ್ಲಿ ಇಂತಹ ಆಸ್ಪತ್ರೆ ನಿರ್ಮಿಸಲಾಗುವುದು. ಒಂದು ಆಸ್ಪತ್ರೆಯಲ್ಲಿ 200-250 ಹಾಸಿಗೆಗಳಿದ್ದು, ಶೇ.20 ರಷ್ಟು ಐಸಿಯು ವೆಂಟಿಲೇಟರ್, ಶೇ.60 ರಷ್ಟು ಆಕ್ಸಿಜನ್, ಶೇ.20 ರಷ್ಟು ಹೈ ಫ್ಲೋ ಆಕ್ಸಿಜನ್ ಇರಲಿದೆ. ಎಲ್ಲ ಜಿಲ್ಲೆಗಳಲ್ಲೂ ಈ ವ್ಯವಸ್ಥೆಯಾಗಲಿದೆ ಎಂದು ತಿಳಿಸಿದರು.

ಕೋವಿಡ್ ಕೇರ್ ಸೆಂಟರ್

ಪ್ರತಿ ಜಿಲ್ಲೆಯಲ್ಲಿ 50-100 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ನಿರ್ಮಿಸಲಿದ್ದು, 10%-20% ಆಕ್ಸಿಜನ್ ಹಾಸಿಗೆ ಇರಲಿದೆ. ಪ್ರತಿ ಸೆಂಟರ್ ನಲ್ಲಿ 20 ಹಾಸಿಗೆಗಳಿಗೆ ಪೋರ್ಟೇಬಲ್ ಆಕ್ಸಿಜನ್ ನೀಡಲಾಗುವುದು. ಒಟ್ಟು 40 ಸಾವಿರ ಪೋರ್ಟೇಬಲ್ ಆಕ್ಸಿಜನ್ ಆಮದು ಮಾಡುವ ಪ್ರಯತ್ನ ಮಾಡಲಾಗುತ್ತಿದೆ. ಬೆಂಗಳೂರಿನ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಅಥವಾ ಎರಡು ಕೇರ್ ಸೆಂಟರ್ ತೆರೆಯಲಾಗುವುದು ಎಂದರು.

ಮುಂಬೈನಲ್ಲಿ ಕಫ್ರ್ಯೂ ವಿಧಿಸಿದ ಬಳಿಕ ದಿನಕ್ಕೆ 3 ಸಾವಿರ ಪ್ರಕರಣ ಕಂಡುಬರುತ್ತಿದೆ. ಕಫ್ರ್ಯೂ ವಿಧಿಸಿದಾಗ ಸೋಂಕು ಕಡಿಮೆಯಾಗುತ್ತದೆ. ಆದ್ದರಿಂದಲೇ ರಾಜ್ಯ ಸರ್ಕಾರ ಕಫ್ರ್ಯೂ ತೀರ್ಮಾನ ಕೈಗೊಂಡಿದೆ. ಜನರು ಹೆಚ್ಚು ಓಡಾಡದೆ ಎಚ್ಚರ ವಹಿಸಬಾರದು. ಕಡಿಮೆ ಲಕ್ಷಣ ಇರುವ ಸೋಂಕಿತರು ಮನೆಯಿಂದ ಹೊರಗೆ ಹೋಗಿ ಹರಡಬಾರದು ಎಂದು ಕೋರಿದರು.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಶಿಕ್ಷಣ ಸಚಿವ ಸುರೇಶ್ ಕುಮಾರ್ ಉಪಸ್ಥಿತರಿದ್ದರು.

ಸಚಿವರು ಹೇಳಿದ ಇತರೆ ಅಂಶಗಳು

ಕೋವಿಡ್ ಅಂಕಿ ಅಂಶ ಮುಚ್ಚಿಡುತ್ತಿಲ್ಲ. ಇದರಲ್ಲಿ ರಾಜಕೀಯ ಬೇಡ. ಈ ಸಂದರ್ಭದಲ್ಲಿ ಆಡಳಿತ ಪಕ್ಷ, ವಿರೋಧ ಪಕ್ಷ ಎಂದು ಇರಬಾರದು. ನುಮ ಸಂಜೀವಿನಿ ತಂದಂತೆ, ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕೋವಿಡ್ ಲಸಿಕೆ ನೀಡಿದೆ. ಇದನ್ನು ಬಳಸಿಕೊಳ್ಳಿ. ಲಕ್ಷ್ಮಣರೇಖೆ ಹಾಕಿಕೊಂಡು ಮನೆಯಲ್ಲೇ ಇರಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com