ಬಾಗಲಕೋಟೆಯಲ್ಲಿ ನಿಯಮ ಉಲ್ಲಂಘಿಸಿ ಮದುವೆ: 13 ಪ್ರಕರಣ ದಾಖಲು

ಜಿಲ್ಲೆಯ ಬಾಗಲಕೋಟೆ ಉಪ ವಿಭಾಗ ವ್ಯಾಪ್ತಿಯಲ್ಲಿ ಮದುವೆ ಕಾರ್ಯದಲ್ಲಿ ಸರಕಾರ ಹೊರಡಿಸಿದ ಮಾರ್ಗಸೂಚಿ ಉಲ್ಲಂಘಿಸಿದಡಿ ಒಟ್ಟು 13 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಬಾಗಲಕೋಟೆ ಉಪವಿಭಾಗಾಧಿಕಾರಿ ಎಂ.ಗಂಗಪ್ಪ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ಉಪ ವಿಭಾಗ ವ್ಯಾಪ್ತಿಯಲ್ಲಿ ಮದುವೆ ಕಾರ್ಯದಲ್ಲಿ ಸರಕಾರ ಹೊರಡಿಸಿದ ಮಾರ್ಗಸೂಚಿ ಉಲ್ಲಂಘಿಸಿದಡಿ ಒಟ್ಟು 13 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಬಾಗಲಕೋಟೆ ಉಪವಿಭಾಗಾಧಿಕಾರಿ ಎಂ.ಗಂಗಪ್ಪ ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಕೊರೋನಾ ಸಾಂಕ್ರಾಮಿಕ ರೋಗ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಮದುವೆ‌ ಕಾರ್ಯಕ್ರಮಕ್ಕೆ 50 ಜನಕ್ಕೆ ಅವಕಾಶ ಕಲ್ಪಿಸಿದೆ. ಅಲ್ಲದೇ ಸ್ಥಳೀಯ ಪೊಲೀಸ್ ಠಾಣೆ, ನಗರ ಮತ್ತು ಗ್ರಾಮೀಣ ಮಟ್ಟದ ಅಧಿಕಾರಿಗಳಿಂದ ಎನ್.ಓ.ಸಿ ಹಾಗೂ ಉಪವಿಬಾಗಾಧಿಕಾರಿಗಳಿಂದ ಷರತ್ತಿಗೆ ಒಳಪಟ್ಟು ಅನುಮತಿ ಪತ್ರ ಹಾಗೂ 50 ಪಾಸ್ ಗಳನ್ನು ನೀಡಲಾಗಿತ್ತು. ಆದರೆ, ಮದುವೆ ಆಯೋಜಕರು ನಿಯಮ ಉಲ್ಲಂಘಿಸಿದ ಹಿನ್ನಲೆಯಲ್ಲಿ  ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆಯ ಬಾಗಲಕೋಟೆ, ಬಾದಾಮಿ, ಗುಳೇದಗುಡ್ಡ, ಹುನಗುಂದ ಹಾಗೂ ಇಲಕಲ್ಲ ತಾಲೂಕಿನ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಏ. 26 ಮತ್ತು 27 ರಂದು ನಡೆದ ಮದುವೆಗಳಲ್ಲಿ ನಿಮಯ ಉಲ್ಲಂಘಿಸಿದ 13 ಮದುವೆ ಆಯೋಜಕರ ಮೇಲೆ ಎಫ್.ಐ.ಆರ್ ದಾಖಲಿಸಲಾಗಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com