

ಕಲಬುರಗಿ: ಲಾಕ್‌ಡೌನ್ ಕಾರಣ ಸ್ವಗ್ರಾಮಕ್ಕೆ ಬರುವಾಗ ಬಳ್ಳಾರಿ ಜಿಲ್ಲೆಯ ಶಿರಗುಪ್ಪ ಬಳಿ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಸುಕಿನ 1.45ರ ಸುಮಾರಿಗೆ ನಡೆದಿದೆ.
ಲಾಕ್‌ಡೌನ್ ಜಾರಿಯಿಂದಾಗಿ ಬೆಂಗಳೂರಿನಿಂದ ಕಾರಿನಲ್ಲಿ ಬರುವಾಗ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಬಳ್ಳಾರಿಯಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ (ತಂದೆ) ಬಸವರಾಜ ಭೀಮರಾವ ಬೆಳ್ಳೂರು(52), ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ (ಮಗ) ಭೀಮರಾವ ಬೆಳ್ಳೂರು (30),ಬಿಇ ಪದವಿಧರ ಸುನೀಲ ಶಿವರಾಜ ಪಾಟೀಲ(30), ಕಾರು ಚಾಲಕ ಕೊರಡಂಪಳ್ಳಿಯ ರೇವಣಸಿದ್ದ ಬಸವರಾಜ ಕೊರಡಂಪಳ್ಳಿ(30) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತರು ಚಿಂಚೋಳಿಯ ಕೊರಪಂಡಳ್ಳಿ ಗ್ರಾಮದವರು ಎಂದು ಗುರುತಿಸಲಾಗಿದೆ, ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.
Advertisement