ರಾಜ್ಯ

ಬೆಳಗಾವಿಯಲ್ಲಿ ಸರಣಿ ಅಪಘಾತ: ಮೂವರ ಸಾವು

ಸರಣಿ ಅಪಘಾತದಲ್ಲಿ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ಹಳ್ಳೂರ್ ಕ್ರಾಸ್ ಬಳಿ ಸಂಭವಿಸಿದೆ.ಮೃತರನ್ನು ಶಾಂತವ್ವ, ಲಕ್ಷ್ಮೀ, ದುಂಡವ್ವ ಉಳ್ಳಾಗಡ್ಡಿ ಎಂದು ಗುರುತಿಸಲಾಗಿದೆ.

ಬೆಳಗಾವಿಯಲ್ಲಿ ಸರಣಿ ಅಪಘಾತ: ಮೂವರ ಸಾವು
ಸಾಂದರ್ಭಿಕ ಚಿತ್ರ
Published On :

ಬೆಳಗಾವಿ: ಸರಣಿ ಅಪಘಾತದಲ್ಲಿ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ಹಳ್ಳೂರ್ ಕ್ರಾಸ್ ಬಳಿ ಸಂಭವಿಸಿದೆ.ಮೃತರನ್ನು ಶಾಂತವ್ವ, ಲಕ್ಷ್ಮೀ, ದುಂಡವ್ವ ಉಳ್ಳಾಗಡ್ಡಿ ಎಂದು ಗುರುತಿಸಲಾಗಿದೆ.

ಹಿಂಬದಿಯಿಂದ ಲಾರಿ ಗುದ್ದಿದ ಪರಿಣಾಮ ನಿಯಂತ್ರಣ ತಪ್ಪಿದ ಕಾರು ಎದುರಿಗೆ ಬರುತ್ತಿದ್ದ ಲಾರಿಗೆ  ಡಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಸ್ಥಳದಲ್ಲೇ ಓರ್ವರು ಕೊನೆಯುಸಿರೆಳೆದಿದ್ದು, ಇನ್ನಿಬ್ಬರೂ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಕಾರು ಚಾಲಕ ಮತ್ತು ಸುನಂದಾ ಬಾಗೋಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.