ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ರಾಜ್ಯದಲ್ಲಿ ಇಂದು ಕೊರೋನಾಗೆ 38 ಬಲಿ, ಬೆಂಗಳೂರಿನಲ್ಲಿ 477 ಸೇರಿ 1674 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಮಹಾಮಾರಿಗೆ ಮಂಗಳವಾರ ಒಂದೇ ದಿನ 38 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 36650ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಮಹಾಮಾರಿಗೆ ಮಂಗಳವಾರ ಒಂದೇ ದಿನ 38 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 36650ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 1674 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,09,958ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 477 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,28,515ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 7 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 1376 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,49,003ಕ್ಕೆ ಏರಿಕೆಯಾಗಿದೆ. ಇನ್ನು 24,280 ಸಕ್ರೀಯ ಪ್ರಕರಣಗಳಿವೆ.

Related Stories

No stories found.

Advertisement

X
Kannada Prabha
www.kannadaprabha.com