
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ನೂತನ ಸಚಿವ ಸಂಪುಟ ಸಭೆಯಲ್ಲಿ ಕೋವಿಡ್ ಟಾಸ್ಕ್ ಫೋರ್ಸ್ ಪುನರ್ ರಚಿಸಲು ತೀರ್ಮಾನಿಸಲಾಗಿದೆ.
ಎಲ್ಲ ಸಚಿವರು ತಮಗೆ ನಿಗದಿಪಡಿಸಿದ ಜಿಲ್ಲೆಗಳಿಗೆ ಭೇಟಿ ನೀಡಿ ಕೋವಿಡ್ ಮತ್ತು ಪ್ರವಾಹ ಪರಿಸ್ಥಿತಿ ಪರಿಶೀಲಿಸಲು ತೀರ್ಮಾನ ಕೈಗೊಳ್ಳಬೇಕು, ಪರಿಶೀಲನೆ ಬಳಿಕ ಪರಿಹಾರ ಕ್ರಮಗಳ ಅಗತ್ಯವಿದ್ದರೆ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ.
ಎಸ್ ಟಿಪಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಪೂರಕವಾಗಿ ಪ್ರತ್ಯೇಕ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವಾಲಯ ಸ್ಥಾಪನೆಗೆ ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿಗಳ ಮೇಲ್ವಿಚಾರಣೆಯಲ್ಲಿ ಮಹಿಳೆಯರ ರಕ್ಷಣೆ ಮತ್ತು ಸಬಲೀಕರಣ ಯೋಜನೆಗಳ ಅನುಷ್ಠಾನಕ್ಕೂ ತೀರ್ಮಾನ ತೆಗೆದುಕೊಳ್ಳಲಾಗಿದೆ.
Advertisement