ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಬೆನ್ನಲ್ಲೇ, ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೂ ಇಡಿ ದಾಳಿ

ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಮನೆ ಬೆನ್ನಲ್ಲೇ, ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
Published on

ಬೆಂಗಳೂರು: ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಮನೆ ಬೆನ್ನಲ್ಲೇ, ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಮಾಜಿ ಸಚಿವ ರೋಷನ್ ಬೇಗ್ ಅವರ ಬೆಂಗಳೂರಿನ ಶಿವಾಜಿನಗರದ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ವಿದೇಶಿ ವ್ಯವಹಾರಗಳು ಕಂಡು ಬಂದ ಹಿನ್ನೆಲೆ, ರೋಷನ್ ಬೇಗ್‌ಗೆ ಸಂಬಂಧಿಸಿದ 6 ಕಡೆ ಏಕಕಾಲದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಡಿ  ಅಧಿಕಾರಿಗಳು ಸಿಆರ್‌ಪಿಎಫ್ ಭದ್ರತೆ ನೇತೃತ್ವದಲ್ಲಿ ಬೆಂಗಳೂರಿನ ಶಿವಾಜಿನಗರದಲ್ಲಿರುವ ಮನೆ ಮೇಲೆ ದಾಳಿ ಮಾಡಿದ್ದಾರೆ ಎನ್ನಲಾಗಿದೆ. 

ಐಎಂಎ ಸಂಸ್ಥೆಯಿಂದ ಬಹುಕೋಟಿ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಆರ್​.ರೋಷನ್ ಬೇಗ್ ಆಸ್ತಿ ಜಪ್ತಿಗೆ ಹೈಕೊರ್ಟ್​ ಆದೇಶ ನೀಡಿತ್ತು. ಅದರಂತೆ ಇಂದು ಸರ್ಕಾರ ರೋಷನ್ ಬೇಗ್ ಆಸ್ತಿಯನ್ನು ಜಪ್ತಿಮಾಡಿದೆ. ರೋಷನ್ ಬೇಗ್​ಗೆ ಸೇರಿದ ಸ್ಥಿರಾಸ್ತಿ, ಬ್ಯಾಂಕ್ ಅಕೌಂಟ್​ನ ಜಪ್ತಿ  ಮಾಡಲಾಗಿದೆ.  

ದಾಳಿ ವೇಳೆ ಮನೆಯಲ್ಲೇ ಇದ್ದ ರೋಷನ್ ಬೇಗ್
ದಾಳಿಯ ವೇಳೆ ರೋಷನ್ ಬೇಗ್ ಮನೆಯಲ್ಲೇ ಇದ್ದರು ಎನ್ನಲಾಗಿದೆ. ಇಡಿ ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ನಡೆಯುತ್ತಿದ್ದು, ಅಧಿಕಾರಿಗಳು ಎಲ್ಲಾ ಲಾಕರ್​ಗಳನ್ನು ಓಪನ್ ಮಾಡಿಸಿ, ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ಮಾಡುತ್ತಿದ್ದಾರೆ.

ರೋಷನ್ ಬೇಗ್ ಪುತ್ರಿಯ ಮನೆ ಮೇಲೂ ಇಡಿ ದಾಳಿ
ಬೆಂಗಳೂರಿನ ಭೂಪಸಂದ್ರದಲ್ಲಿರುವ ರೋಷನ್ ಬೇಗ್ ಪುತ್ರಿಯ ಮನೆ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಾಲ್ವರು ಅಧಿಕಾರಿಗಳ ತಂಡದಿಂದ ಮನೆಯಲ್ಲಿ ಪರಿಶೀಲನೆ ನಡೆಯುತ್ತಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com