
ಬೆಂಗಳೂರು: ಮೇಕೆದಾಟು ಯೋಜನೆಯಲ್ಲಿ ಯಾವುದೇ ರೀತಿಯ ರಾಜಿಯಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ತಮಿಳುನಾಡಿನಲ್ಲಿ ಮೇಕೆದಾಟು ಯೋಜನೆಯನ್ನು ರಾಜಕಾರಣಕ್ಕಾಗಿ ಅದನ್ನು ಬಳಸಿಕೊಳ್ಳುತ್ತಿದ್ದಾರೆ. ಯಾವುದೇ ಪಕ್ಷವಿರಲಿ ಅದನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಯಾರಾದರೂ ಅದನ್ನು ಪ್ರತಿಭಟಿಸುತ್ತಿದ್ದರೆ ಅದು ನಮಗೆ ಸಂಬಂಧಿಸಿದ್ದಲ್ಲ. ರಾಜಾರಣಕ್ಕಾಗಿಯೇ ಅದನ್ನು ವಿರೋಧಿಸಲಾಗುತ್ತಿದೆ ಎಂದರು.
ನಾವು ಈ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ. ಕುಡಿಯುವ ನೀರು, ಇಂಧನ ಹಾಗೂ ಬರಗಾಲದಂತಹ ಸಂಕಷ್ಟ ಸಮಯದಲ್ಲಿ ಉಪಯೋಗವಾಗುವಂತಹ ಯೋಜನೆ ಇದಾಗಿದೆ. ಈ ಯೋಜನೆಯ ಉದ್ದೇಶ ಎಲ್ಲರಿಗೂ ಗೊತ್ತಿದೆ ಎಂದು ಸಿಎಂ ಹೇಳಿದ್ದಾರೆ.
ಇತ್ತೀಚೆಗೆ ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಭೇಟಿಯಾದಾಗ ಮೇಕೆದಾಟು ಯೋಜನೆ ಬಗ್ಗೆ ಸ್ಪಷ್ಟವಾಗಿ ಚರ್ಚಿಸಿದ್ದೇವೆ. ಸಂಸದರ ನಿಯೋಗ ಸಹ ಕೇಂದ್ರಕ್ಕೆ ಯೋಜನೆ ಪುರಸ್ಕಾರಕ್ಕೆ ಮನವಿ ಮಾಡಿದ್ದು, ಆದಷ್ಟು ಬೇಗ ಡಿಪಿಆರ್ ಅನುಮತಿ ಸಿಗುವ ವಿಶ್ವಾಸವಿದೆ ಎಂದು ಸಿಎಂ ತಿಳಿಸಿದರು.
Advertisement