ಹಾಸನ: ನರ್ಸಿಂಗ್ ಪರೀಕ್ಷೆ ಬರೆಯಲು ಕೇರಳದಿಂದ ಬಂದಿದ್ದ 21 ವಿದ್ಯಾರ್ಥಿನಿಯರಲ್ಲಿ ಕೊರೋನಾ ಪಾಸಿಟಿವ್!

ನರ್ಸಿಂಗ್ ಪರೀಕ್ಷೆ ಬರೆಯುವ ಸಲುವಾಗಿ ನೆರೆ ರಾಜ್ಯ ಕೇರಳದಿಂದ ಹಾಸನಕ್ಕೆ ಬಂದಿದ್ದ ಒಂದೇ ಕಾಲೇಜಿನ 21 ಮಂದಿ ವಿದ್ಯಾರ್ಥಿನಿಯರಲ್ಲಿ ಕೊರೋನಾ ಪಾಸಿಟಿವ್ ಬಂದಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಹಾಸನ: ನರ್ಸಿಂಗ್ ಪರೀಕ್ಷೆ ಬರೆಯುವ ಸಲುವಾಗಿ ನೆರೆ ರಾಜ್ಯ ಕೇರಳದಿಂದ ಹಾಸನಕ್ಕೆ ಬಂದಿದ್ದ ಒಂದೇ ಕಾಲೇಜಿನ 21 ಮಂದಿ ವಿದ್ಯಾರ್ಥಿನಿಯರಲ್ಲಿ ಕೊರೋನಾ ಪಾಸಿಟಿವ್ ಬಂದಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ. 

ಕರ್ನಾಟಕ ರಾಜ್ಯಾದ್ಯಂತ ಶಾಲಾ-ಕಾಲೇಜು ಆರಂಭಕ್ಕೆ ರಾಜ್ಯ ಸರ್ಕಾರ ಈಗಾಗಲೇ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಕೇರಳದಿಂದ ಪರೀಕ್ಷೆಗೆ ಹಾಜರಾಗಲು ಹಾಸನದ ನಿಸರ್ಗ ನರ್ಸಿಂಗ್ ಕಾಲೇಜಿಗೆ ಬಂದಿದ್ದ 21 ವಿದ್ಯಾರ್ಥಿನಿಯಲ್ಲಲಿ ಕೊರೋನಾ ಪಾಸಿಟಿವ್ ವರದಿ ಬಂದಿರುವುದು ಸಾರ್ವಜನಕರಿಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. 

ರಾಜ್ಯದಲ್ಲಿ ಈಗಾಗಲೇ 3ನೇ ಅಲೆ ಭೀತಿ ಎದುರಾಗಿದ್ದು, ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಹರುತ್ತಿರುವುದು ಹೆಚ್ಚು ಅಪಾಯಕಾರಿ ಬೆಳವಣಿಗೆಯಾಗಿದೆ. 

ಈ ಬೆಳವಣಿಗೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು, ಜಿಲ್ಲೆಯ ವಿವಿಧ ಕಾಲೇಜುಗಳಲ್ಲಿ ಶಿಕ್ಷಣ ಕಲಿಕೆಗೆ ಕೇರಳದಿಂದ ಆಗಮಿಸಿರುವ ವಿದ್ಯಾರ್ಥಿಗಳನ್ನು ಮೊದಲು ಐಸೋಲೇಷನ್ ಮಾಡಿ, ಮತ್ತೊಮ್ಮೆ ಕೋವಿಡ್ ಪರೀಕ್ಷೆಗೊಳಪಡಿಸಿ ನೆಗೆಟಿವ್ ವರದಿ ಬಂದ ನಂತರವೇ ತರಗತಿಗಳಿಗೆ ಹಾಜರಾಗಲು ಅವಕಾಶ ನೀಡಬೇಕೆಂದು ಸೂಚಿಸಿದ್ದಾರೆ. 

ನಿನ್ನೆಯಷ್ಟೇ ಅದಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕೇರಳದಿಂದ ಬರುವ ಎಲ್ಲಾ ನರ್ಸಿಂಗ್ ಹಾಗೂ ಇತರೆ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಆರ್'ಟಿಪಿಸಿಆರ್ ಪರೀಕ್ಷೆ ಮಾಡಿಸಿ ಸೋಂಕು ಹರಡದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ನಿರ್ದೇಶಿಸಿದರು. 

ಪ್ರತಿಯೊಂದು ವಿದ್ಯಾರ್ಥಿಗಳಿಗೂ ಕೋವಿಡ್ ಮೊದಲೇ ಡೋಸ್ ಲಸಿಕೆ ನೀಡಿರಬೇಕು. ಪ್ರತಿ ವಿದ್ಯಾರ್ಥಿಗಳಿಗೂ 15 ದಿನಗಳಿಗೊಮ್ಮೆ ಕಡ್ಡಾಯ ಕೋವಿಡ್ ಪರೀಕ್ಷೆ ಮಾಡಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಅವರು ಮಾತನಾಡಿ, ಸರ್ಕಾರದ ಸೂಚನೆಯಂತೆ ಕೇರಳದಿಂದ ಬರುವವರನ್ನು ಅಲ್ಲಿನ ಪರೀಕ್ಷೆಯ ವರದಿ ನೋಡಲಾಗುತ್ತಿದ್ದು, ಜೊತೆಗೆ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಹಾಸನ ನಗರದ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿರುವ ಕೇರಳ ಮೂಲಕ 21 ವಿದ್ಯಾರ್ಥಿನಿಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಎಲ್ಲಾ ವಿದ್ಯಾರ್ಥಿಗಳು ಕೆ.ಆರ್.ಪುರಂನಲ್ಲಿ ಇರುವಂತಹ ಖಾಸಗಿ ಪಿಜಿಯಲ್ಲಿ ಇದ್ದುಕೊಂಡು ನರ್ಸಿಂಗ್ ಶಿಕ್ಷಣ ಪಡೆಯುತ್ತಿದ್ದರು. ವಿದ್ಯಾರ್ಥಿಗಳೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 27 ವಿದ್ಯಾರ್ಥಿನಿಯರನ್ನು ಈಗಾಗಲೇ ಖಾಸಗಿ ವಸತಿ ಗೃಹದಲ್ಲಿ ಕ್ವಾರಂಟೈನ್ ನಲ್ಲಿ ಇಡಲಾಗಿದ್ದು, ಇವರಿಗೂ ಕೂಡ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಇಲಾಖೆಯಿಂದ ಈಗಾಗಲೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು. 

21 ಕೇರಳ ವಿದ್ಯಾರಥಿಗಳಿಗೆ ಕೊರೋನಾ ಸೋಂಕು ತಗುಲಿರುವುದರಿಂದ ಹಾಗೂ ಇವರ ಪ್ರಾಥಮಿಕ ಸಂಪರ್ಕದಲ್ಲಿರುವಂತಹ ಸಿಬ್ಬಂದಿ, ವಿದ್ಯಾರ್ಥಿಗಳಿಗೂ ಕೋವಿಡ್ ಪರೀಕ್ಷೆ ಮಾಡಿಸಿ, ಅಗತ್ಯ ಕ್ರಮವನ್ನು ವಹಿಸಲಾಗುತ್ತಿದೆ ಎಂದು ತಿಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com