ರಾತ್ರಿ ಕರ್ಫ್ಯೂ ಹಿನ್ನೆಲೆ: ಶನಿವಾರದಿಂದ ರಾತ್ರಿ 8 ಗಂಟೆಯವರೆಗೆ ಮಾತ್ರ ಮೆಟ್ರೋ ಸೇವೆ

ಕೋವಿಡ್ -19 ಹರಡುವಿಕೆ ತಡೆಗಾಗಿ ಸರ್ಕಾರ ರಾತ್ರಿ  9 ಗಂಟೆಯಿಂದ ಕರ್ಫ್ಯೂ ವಿಧಿಸಿರುವುದರಿಂದ ನಮ್ಮ ಮೆಟ್ರೋ ರೈಲು ಸೇವೆಯಲ್ಲೂ ಒಂದು ಗಂಟೆ ಕಡಿತ ಮಾಡಲಾಗಿದೆ
ಮೆಟ್ರೋ ರೈಲು
ಮೆಟ್ರೋ ರೈಲು

ಬೆಂಗಳೂರು: ಕೋವಿಡ್ -19 ಹರಡುವಿಕೆ ತಡೆಗಾಗಿ ಸರ್ಕಾರ ರಾತ್ರಿ  9 ಗಂಟೆಯಿಂದ ಕರ್ಫ್ಯೂ ವಿಧಿಸಿರುವುದರಿಂದ ನಮ್ಮ ಮೆಟ್ರೋ ರೈಲು ಸೇವೆಯಲ್ಲೂ ಒಂದು ಗಂಟೆ ಕಡಿತ ಮಾಡಲಾಗಿದೆ.  ರಾತ್ರಿ 8 ಗಂಟೆಯವರೆಗೆ ಮಾತ್ರ ಸೇವೆ ಲಭ್ಯ ಇರಲಿದೆ ಎಂದು ಬಿಎಂಆರ್ ಸಿಎಲ್ ತಿಳಿಸಿದೆ.

ರಾಜ್ಯದಲ್ಲಿ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ವಿಧಿಸಲಾಗಿರುವ ರಾತ್ರಿ ಕರ್ಫ್ಯೂ ದೃಷ್ಟಿಯಿಂದ ಕೊನೆಯ ಮೆಟ್ರೋ ರೈಲು ಸೇವೆ ಟರ್ಮಿನಲ್ ನಿಲ್ದಾಣಗಳಿಂದ ರಾತ್ರಿ 9 ಗಂಟೆಯ ಬದಲು ರಾತ್ರಿ 8 ಗಂಟೆಗೆ ಅಂತ್ಯವಾಗಲಿದೆ ಎಂದು ಬಿಎಂಆರ್ ಸಿಎಲ್ ಸಾರ್ವಜನಿಕ ಪ್ರಕಟಣೆಯಲ್ಲಿ ತಿಳಿಸಿದೆ. 

 ನಾಳೆಯಿಂದಲೇ ಈ ಬದಲಾವಣೆ ಜಾರಿಗೆ ಬರಲಿದ್ದು, ಬೆಳಗ್ಗೆ 7 ಗಂಟೆಯಿಂದ ರಾತ್ರಿ 8 ಗಂಟೆಯವೆರೆಗೂ ಮಾತ್ರ ರೈಲು ಸೇವೆ ಲಭ್ಯವಾಗಲಿದೆ ಎಂದು ನಮ್ಮ ಮೆಟ್ರೋ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com