ಕಾದು ಕಾದು ಸುಸ್ತಾಗಿ ಕೊನೆಗೆ ತಾವೇ ವೇತನ ತಾರತಮ್ಯ ಕುರಿತು ಆಂತರಿಕ ಸಮಿತಿ ರಚಿಸಿದ ರಾಜ್ಯ ಸರ್ಕಾರಿ ನೌಕರರ ಸಂಘ!

ಉತ್ತಮ ವೇತನಕ್ಕಾಗಿ ಒತ್ತಾಯಿಸುತ್ತಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಕೇಂದ್ರ ಸರ್ಕಾರಿ ನೌಕರರಿಗೆ ಹೋಲಿಸಿದರೆ ತಮ್ಮ ವೇತನ ತುಂಬಾ ಕಡಿಮೆ ಇದ್ದು, ವೇತನದಲ್ಲಿನ ವ್ಯತ್ಯಾಸವನ್ನು ಅಧ್ಯಯನ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಉತ್ತಮ ವೇತನಕ್ಕಾಗಿ ಒತ್ತಾಯಿಸುತ್ತಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಕೇಂದ್ರ ಸರ್ಕಾರಿ ನೌಕರರಿಗೆ ಹೋಲಿಸಿದರೆ ತಮ್ಮ ವೇತನ ತುಂಬಾ ಕಡಿಮೆ ಇದ್ದು, ವೇತನದಲ್ಲಿನ ವ್ಯತ್ಯಾಸವನ್ನು ಅಧ್ಯಯನ ಮಾಡಲು ಆಂತರಿಕ ಸಮಿತಿ ರಚಿಸಿದೆ.

ತಮಗೂ ಕೇಂದ್ರ ಸರ್ಕಾರಿ ನೌಕರರಿಗೆ ಸಮಾನಾದ ವೇತನ ನೀಡುವಂತೆ ರಾಜ್ಯ ಸರ್ಕಾರಿ ನೌಕರರು ಹಲವು ವರ್ಷಗಳಿಂದ ಒತ್ತಾಯಿಸುತ್ತಿದ್ದಾರೆ. ಆದರೆ ಈ ಬಗ್ಗೆ ರಾಜ್ಯ ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾಗದ ಹಿನ್ನೆಲೆಯಲ್ಲಿ ಈಗ ವೇತನ ಆಯೋಗಗಳಲ್ಲಿ ಕೆಲಸ ಮಾಡಿದ ನಿವೃತ್ತ ನೌಕರರನ್ನು ಒಳಗೊಂಡ ಸಮಿತಿ ರಚಿಸಿದ್ದು, ಈ ಸಮಿತಿಯೂ ಒಂದು ತಿಂಗಳಲ್ಲಿ ತನ್ನ ವರದಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಲು ಆಶಿಸಿದೆ.

ಈ ವರದಿಯು ಸಂಪೂರ್ಣ ಅಂಕಿಅಂಶ ಮತ್ತು ರಾಜ್ಯ ಹಾಗೂ ಕೇಂದ್ರ ಸರ್ಕಾರಿ ನೌಕರರ ನಡುವಿನ ವಿವಿಧ ಕೇಡರ್‌ಗಳ ವೇತನದಲ್ಲಿನ ವ್ಯತ್ಯಾಸದ ಬಗ್ಗೆ ವರದಿ ನೀಡುವ ನಿರೀಕ್ಷೆಯಿದೆ. ಇದನ್ನು ಹೊರತುಪಡಿಸಿ ಇತರ ರಾಜ್ಯಗಳಲ್ಲಿನ ನೌಕರರ ವೇತನ ಹಾಗೂ ಹೈಕೋರ್ಟ್ ಸಿಬ್ಬಂದಿಯ ವೇತನದ ಬಗ್ಗೆಯೂ ವರದಿ ನೀಡುವ ಸಾಧ್ಯತೆ ಇದೆ.

ಕೃಷಿ, ಗೃಹ, ನಗರಾಭಿವೃದ್ಧಿ, ಆರೋಗ್ಯ, ಪ್ರವಾಸೋದ್ಯಮ, ಶಿಕ್ಷಣ, ಆಹಾರ ಮತ್ತು ನಾಗರಿಕ ಸರಬರಾಜು, ವಿದ್ಯುತ್, ಜಲ ಸಂಪನ್ಮೂಲಗಳು, ಅಬಕಾರಿ, ವೈದ್ಯಕೀಯ ಶಿಕ್ಷಣ ಇಲಾಖೆ ಒಳಗೊಂಡಂತೆ ರಾಜ್ಯ ಸರ್ಕಾರದ 72 ಇಲಾಖೆಗಳಲ್ಲಿ ಸುಮಾರು 5.3 ಲಕ್ಷಕ್ಕೂ ಹೆಚ್ಚು ಖಾಯಂ ಉದ್ಯೋಗಿಗಳು ಮತ್ತು 1.5 ಲಕ್ಷ ಗುತ್ತಿಗೆ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ.

ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಜತೆ ಮಾತನಾಡಿದ ಅಸೋಸಿಯೇಷನ್ ​​ಅಧ್ಯಕ್ಷ ಸಿ ಎಸ್ ಷಡಕ್ಷರಿ ಅವರು, 7.7 ಲಕ್ಷ ಮಂಜೂರಾದ ಹುದ್ದೆಗಳಿದ್ದರೆ 5.4 ಲಕ್ಷ ಸಿಬ್ಬಂದಿ ಮಾತ್ರ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯ ಖಾಲಿ ಹುದ್ದೆಗಳಿಂದಾಗಿ, ಕೆಲವು ಇಲಾಖೆಗಳಲ್ಲಿ ಈಗಿರುವ ಸಿಬ್ಬಂದಿಗಳ ಮೇಲೆ ಕೆಲಸದ ಹೊರೆ ಹೆಚ್ಚಾಗಿದೆ ಎಂದು ಅವರು ತಿಳಿಸಿದರು

ಷಡಕ್ಷರಿ ಪ್ರಕಾರ, ರಾಜ್ಯ ಸರ್ಕಾರದ ಗ್ರೂಪ್-ಡಿ ಉದ್ಯೋಗಿಗೆ ತಿಂಗಳಿಗೆ 25,000 ರೂ. ಇದ್ದರೆ, ಕೇಂದ್ರ ಸರ್ಕಾರದ ಗ್ರೂಪ್-ಡಿ ಉದ್ಯೋಗಿಗೆ 36,000 ರೂ. ಇದೆ. ಅದೇ ರೀತಿ, ರಾಜ್ಯ ಸರ್ಕಾರದ ಎಫ್ ಡಿಎ ಉದ್ಯೇಗಿಗೆ ರೂ. 40,000 ಇದ್ದರೆ, ಕೇಂದ್ರ ಸರ್ಕಾರದ ಎಫ್ ಡಿಎ ತಿಂಗಳಿಗೆ ರೂ. 55,000 ಗಳಿಸುತ್ತಾರೆ ಎಂದರು.

" ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ನಡುವೆ ರೂ. 6,000 ಮತ್ತು ರೂ. 40,000 ವರೆಗೆ ವ್ಯತ್ಯಾಸವಿದೆ. ರಾಜ್ಯದ ಉದ್ಯೋಗಿಗಳು ಅದೇ ರೀತಿಯ ಕೆಲಸವನ್ನು ಮಾಡುತ್ತಾರೆ, ಅದೇ ಪ್ರಯತ್ನಗಳನ್ನು ಮಾಡುತ್ತಾರೆ, ಆದರೆ ಅವರ ಸಂಬಳ ಮಾತ್ರ ಕಡಿಮೆ ಇರುತ್ತದೆ’ಎಂದು ಅವರು ಹೇಳಿದರು. 

ಇದಲ್ಲದೆ, ಗುಜರಾತ್, ತಮಿಳುನಾಡು, ಆಂಧ್ರಪ್ರದೇಶ, ಕೇರಳ ಹಾಗೂ ಇತರ ರಾಜ್ಯಗಳು ಸೇರಿದಂತೆ 22 ರಾಜ್ಯಗಳ ಸರ್ಕಾರಿ ನೌಕರರು ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾಗಿ ವೇತನ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com