ಪ್ರತಿ ಜಿಲ್ಲೆಯಲ್ಲೂ ಮಕ್ಕಳಿಗಾಗಿ ಪ್ರತ್ಯೇಕ ಐಸಿಯು ಘಟಕ, ಗಡಿ ಜಿಲ್ಲೆಗಳಿಗೆ ಹೆಚ್ಚಿನ ಲಸಿಕೆ ಪೂರೈಕೆ: ಸಿಎಂ ಬೊಮ್ಮಾಯಿ

ಸಂಭವನೀಯ ಮೂರನೇ ಕೊರೋನಾ ಅಲೆಯಿಂದ ಮಕ್ಕಳನ್ನು ರಕ್ಷಿಸಲು ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಗೆ ಹೆಚ್ಚಿನ ಮೂಲಸೌಕರ್ಯಗಳನ್ನು ಒದಗಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು...
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ
Updated on: 

ಮಂಗಳೂರು: ಸಂಭವನೀಯ ಮೂರನೇ ಕೊರೋನಾ ಅಲೆಯಿಂದ ಮಕ್ಕಳನ್ನು ರಕ್ಷಿಸಲು ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಗೆ ಹೆಚ್ಚಿನ ಮೂಲಸೌಕರ್ಯಗಳನ್ನು ಒದಗಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.

ಇಂದು ಮಂಗಳೂರಿನಲ್ಲಿ ಎಸ್ ಡಿಆರ್ ಎಫ್ ಅನುದಾನದಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲಿ ನಿರ್ಮಾಣಗೊಂಡ 32 ಬೆಡ್ ಗಳ ಮೆಡಿಸಿನ್ ವಿಭಾಗ ಮತ್ತು ಐಸಿಯು ಘಟಕ ಉದ್ಘಾಟಿಸಿ ಮಾತನಾಡಿದ ಸಿಎಂ, ಪ್ರತಿ ಜಿಲ್ಲೆಯಲ್ಲೂ ಮಕ್ಕಳಿಗಾಗಿ ಪ್ರತ್ಯೇಕ ಐಸಿಯು ಘಟಕ ತೆರೆದು ಅರೋಗ್ಯ ತಪಾಸಣೆಗೆ ಆದ್ಯತೆ ನೀಡುವುದಾಗಿ ಹೇಳಿದರು. 

ಮಂಗಳೂರಿನ  ವೆನ್ಲಾಕ್ ಆಸ್ಪತ್ರೆಯಲ್ಲಿ ಅರೋಗ್ಯ ಇಲಾಖೆ, ಜಿಲ್ಲಾಡಳಿತ ಸೇರಿ ವೆಂಟಿಲೇಟರ್, ಮೊನಿಟರ್ ಸೇರಿದಂತೆ ಉತ್ತಮವಾದ ಐಸಿಯು ಘಟಕವನ್ನು ನಿರ್ಮಾಣ ಮಾಡಲಾಗಿದ್ದು, ಇದೆ ರೀತಿಯಲ್ಲಿ ಇನ್ನು ಮುಂದಿನ ದಿನಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲಿಯೂ ಆಧುನಿಕ ಘಟಕಗಳನ್ನು ನಿರ್ಮಾಣ ಮಾಡುವ ಉದ್ದೇಶ ಹೊಂದಲಾಗಿದೆ. ಯಾವುದೇ ಪರಿಸ್ಥಿತಿ ಬಂದರು ಅದನ್ನು ಎದುರಿಸಲು ಆರೋಗ್ಯ ಇಲಾಖೆ ಸನ್ನದ್ಧರಾಗಬೇಕು ಎಂದು ಹೇಳಿದರು.

ಇನ್ನು ಕೊರೋನಾ ನಿಯಂತ್ರಿಸಲು ಗಡಿಭಾಗದ ಜಿಲ್ಲೆಗಳಿಗೆ ಹೆಚ್ಚಿನ ಲಸಿಕೆ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮಂಗಳೂರಿನಲ್ಲಿಂದು ಜಿಲ್ಲಾ ಕೊರೋನಾ ಪ್ರಗತಿ ಪರಿಶೀಲನಾ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವಾರ ದೆಹಲಿಗೆ ತೆರಳಿ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿ ಮಾಡಿ ರಾಜ್ಯಕ್ಕೆ ಹೆಚ್ಚಿನ ಪ್ರಮಾಣದ ಲಸಿಕೆ ಪೂರೈಸುವಂತೆ ಮನವಿ ಮಾಡಲಾಗುವುದು ಎಂದರು. 

ಕೇಂದ್ರದಿಂದ ಲಭ್ಯವಾಗುವ ಲಸಿಕೆಯನ್ನು ಗಡಿ ಭಾಗದ ಜಿಲ್ಲೆಗಳಿಗೆ ಪೂರೈಕೆ ಮಾಡಲು ಆದ್ಯತೆ  ನೀಡಲಾಗುವುದು. ಮುಂದಿನ ದಿನಗಳಲ್ಲಿ ಗಡಿ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಕೊರೋನಾ ಸೋಂಕು ಹರಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು, ಪರೀಕ್ಷೆ , ತಪಾಸಣೆ ಹೆಚ್ಚಿಸಬಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com