ರಾಜ್ಯದ  ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಹೊಸ ಡಿಪ್ಲೊಮಾ ಕೋರ್ಸುಗಳು ಆರಂಭ: ಡಾ. ಸಿ.ಎನ್. ಅಶ್ವತ್ಥ ನಾರಾಯಣ

ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಹೊಸ ಡಿಪ್ಲೋಮಾ ಕೋರ್ಸ್ ಗಳನ್ನು ಪರಿಚಯಿಸುತ್ತಿರುವುದಾಗಿ ಉನ್ನತ ಶಿಕ್ಷಣ ಹಾಗೂ ಐಟಿ ಬಿಟಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಡಾ. ಸಿ.ಎನ್. ಅಶ್ವತ್ಥ ನಾರಾಯಣ ಮತ್ತಿತರರು
ಡಾ. ಸಿ.ಎನ್. ಅಶ್ವತ್ಥ ನಾರಾಯಣ ಮತ್ತಿತರರು

ಬೆಂಗಳೂರು: ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಹೊಸ ಡಿಪ್ಲೋಮಾ ಕೋರ್ಸ್ ಗಳನ್ನು ಪರಿಚಯಿಸುತ್ತಿರುವುದಾಗಿ ಉನ್ನತ ಶಿಕ್ಷಣ ಹಾಗೂ ಐಟಿ ಬಿಟಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

 ಈ ಕುರಿತು ಟ್ವೀಟ್ ಮಾಡಿರುವ ಅವರು, ಉದ್ಯಮ 4.0 ಅಪೇಕ್ಷಿಸುವ  ಜ್ಞಾನ ಮತ್ತು ಕೌಶಲ್ಯಗಳನ್ನು ನೀಡುವಂತಹ ಹೊಸ ಉದ್ಯೋನ್ಮುಖ ಕ್ಷೇತ್ರಗಳಲ್ಲಿ 2021-22ನೇ ಸಾಲಿನಲ್ಲಿ ಹೊಸ ಕೋರ್ಸುಗಳಿಗೆ ಪ್ರವೇಶಾತಿ ಆಗಲಿದೆ ಎಂದಿದ್ದಾರೆ.

ಸೈಬರ್ ಸೆಕ್ಯೂರಿಟಿ, ಲಾಜಿಸ್ಟಿಕ್ಸ್ ಟೆಕ್ನಾಲಜಿ, ಟ್ರಾವೆಲ್ ಅಂಡ್ ಟೂರಿಸಂ, ಡೈರೆಕ್ಷನ್, ಸ್ಕ್ರೀನ್ ಫ್ಲೇ ಅಂಡ್ ಟಿವಿ ಪ್ರೊಡಕ್ಷನ್, ಕ್ಲೌಡ್ ಕಂಪ್ಯೂಟಿಂಗ್ ಅಂಡ್ ಬಿಗ್ ಡೇಟಾ, ಫುಡ್ ಪ್ರೊಸೆಸಿಂಗ್ ಅಂಡ್  ಪ್ರಿಸವ್ರೇಷನ್, ಆಟೋಮೇಷನ್ ಮತ್ತಿತರ ಕ್ಷೇತ್ರಗಳಲ್ಲಿ  ಪ್ರವೇಶಾತಿ ಆಗಲಿದ್ದು, ಯುವಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com