ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಪ್ರಕರಣದ ತನಿಖೆ ನಡೆಯುತ್ತಿದೆ, ಶೀಘ್ರದಲ್ಲೆ ಕಾರಣ ಪತ್ತೆ: ಗೃಹ ಸಚಿವ ಆರಗ ಜ್ಞಾನೇಂದ್ರ 

ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ನಿವಾಸದ ಮುಂದಿಟ್ಟಿದ್ದ ಕಾರುಗಳಿಗೆ ಬೆಂಕಿ ಹಚ್ಚಿ ನಾಶ ಮಾಡಿದ ಕುಕೃತ್ಯಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಶಾಸಕರ ನಿವಾಸಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.
ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ
Updated on

ಬೆಂಗಳೂರು: ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ನಿವಾಸದ ಮುಂದಿಟ್ಟಿದ್ದ ಕಾರುಗಳಿಗೆ ಬೆಂಕಿ ಹಚ್ಚಿ ನಾಶ ಮಾಡಿದ ಕುಕೃತ್ಯಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಶಾಸಕರ ನಿವಾಸಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಸಿ ಕ್ಯಾಮೆರಾದಿಂದ ಒಂದೆರಡು ಸುಳಿವು ಸಿಗುತ್ತಿತ್ತು ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಅದರ ಆಧಾರದ ಮೇಲೆ ಈಗಾಗಲೇ ತನಿಖೆ ಆರಂಭವಾಗಿದೆ. ನಗರ ಪೊಲೀಸ್ ಆಯುಕ್ತರು ಕೂಡ ಇಲ್ಲಿಗೆ ಬಂದು ಮಾಹಿತಿ ಪಡೆದುಕೊಂಡು ಹೋಗಿದ್ದಾರೆ ಎಂದರು.

ಬಿಜೆಪಿ ಶಾಸಕರೇ ಆಗಿರುವ ಸತೀಶ್ ರೆಡ್ಡಿಯವರಿಗೆ ಈ ರೀತಿ ಆಗಿರುವುದು ಬಹಳ ನೋವು ತಂದಿದೆ. ಒಬ್ಬ ಶಾಸಕರಿಗೇ ಹೀಗಾದರೆ ಸಾಮಾನ್ಯರ ಪಾಡೇನು ಎಂದು ಯೋಚಿಸುವಂತಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಘಟನೆ ಪುನರಾವರ್ತನೆಯಾಗದಂತೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ, ಘಟನೆ ಹಿಂದಿನ ಕಾರಣವೇನು ಎಂದು ಪತ್ತೆಹಚ್ಚಲಿದ್ದಾರೆ ಎಂದು ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com