ನಷ್ಟದಲ್ಲಿರುವ ರೋಗಗ್ರಸ್ತ ಕೈಗಾರಿಕೆಗಳನ್ನು ಮುಚ್ಚುವುದಿಲ್ಲ: ಮುರುಗೇಶ್ ನಿರಾಣಿ ಅಭಯ

ನಿರಂತರ ನಷ್ಟದಿಂದ ರೋಗಗ್ರಸ್ತವಾಗಿರುವ ರಾಜ್ಯ ಸರ್ಕಾರಿ ಸ್ವಾಮ್ಯದ ನಿಗಮಗಳನ್ನು ಪುನಶ್ಚೇತನಗೊಳಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್‌. ನಿರಾಣಿ ತಿಳಿಸಿದರು.
ಮುರುಗೇಶ್ ನಿರಾಣಿ
ಮುರುಗೇಶ್ ನಿರಾಣಿ
Updated on

ಬೆಂಗಳೂರು:ನಿರಂತರ ನಷ್ಟದಿಂದ ರೋಗಗ್ರಸ್ತವಾಗಿರುವ ರಾಜ್ಯ ಸರ್ಕಾರಿ ಸ್ವಾಮ್ಯದ ನಿಗಮಗಳನ್ನು ಪುನಶ್ಚೇತನಗೊಳಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್‌. ನಿರಾಣಿ ತಿಳಿಸಿದರು.

ವಿಧಾನಸೌಧ ಕಚೇರಿಯಲ್ಲಿ ಶುಕ್ರವಾರ ಮಾತನಾಡಿ,''ಕಲಬುರಗಿಯ ಸಿಮೆಂಟ್‌ ಕಾರ್ಪೊರೇಷನ್‌, ಮೈಶುಗರ್‌, ಮೈಸೂರು ಪೇಪರ್‌ ಮಿಲ್ಸ್‌ ಮತ್ತಿತರ ಸಂಸ್ಥೆಗಳು ನಷ್ಟದ ಹಾದಿಯಲ್ಲಿವೆ. ಇಂಥ ಸಂಸ್ಥೆಗಳನ್ನು ಲಾಭದತ್ತ ಕೊಂಡೊಯ್ಯುವ ಬಗ್ಗೆ ದಿಲ್ಲಿಗೆ ಹೋಗಿದ್ದಾಗ ಕೇಂದ್ರ ಸಚಿವರೊಂದಿಗೆ ಚರ್ಚಿಸಿದ್ದೇನೆ. ಕೈಗಾರಿಕೆಗಳನ್ನು ಮುಚ್ಚುವುದಿಲ್ಲ," ಎಂದರು.

ನೈಸರ್ಗಿಕ ಸಂಪನ್ಮೂಲ ಸದ್ಬಳಕೆ ಮಾಡಿಕೊಂಡು ಉದ್ಯೋಗ ಕ್ರಾಂತಿ ಸೃಷ್ಟಿಸುವ ಗುರಿಯಿದೆ. ಕೆಐಎಡಿಬಿಯಿಂದ ಪಡೆದ ಜಮೀನನ್ನು ನಿರ್ದಿಷ್ಟ ಉದ್ದೇಶಕ್ಕೆ ಬಳಸಬೇಕು. ದುರುಪಯೋಗವಾಗಿದ್ದರೆ ಸಮೀಕ್ಷೆ ನಡೆಸಲಾಗುವುದು. ತನಿಖೆಗೂ ಆದೇಶಿಸಿ ಕ್ರಮ ಕೈಗೊಳ್ಳಲಾಗುವುದು," ಎಂದರು.

"ಕೆಜಿಎಫ್‌ ಬಳಿ 3 ಸಾವಿರಕ್ಕೂ ಹೆಚ್ಚು ಜಮೀನು ಇದೆ. ಇದರ ಬಳಕೆ ಸಂಬಂಧ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಜತೆಗೆ ಮಾತುಕತೆ ನಡೆಸಲಾಗಿದೆ. ಕೆಜಿಎಫ್‌ ಜಾಗವನ್ನು ಇಲಾಖೆಗೆ ವಹಿಸಿದರೆ ಟೌನ್‌ಶಿಪ್‌ ನಿರ್ಮಿಸಲಾಗುವುದು. ಈ ಹಿಂದೆ ನಾನು ಕೈಗಾರಿಕಾ ಸಚಿವನಾಗಿದ್ದಾಗ ಅಂದಾಜು 11.8 ಲಕ್ಷ ಕೋಟಿ ರೂ. ಹೂಡಿಕೆಯಾಗಿತ್ತು. 15 ಲಕ್ಷ ಉದ್ಯೋಗ ಸೃಷ್ಟಿಯಾಗಿತ್ತು. ಈ ಬಾರಿಯೂ ಉತ್ತಮವಾಗಿ ಕಾರ್ಯ ನಿರ್ವಹಿಸಲಾಗುವುದು," ಎಂದು ವಿಶ್ವಾಸ ವ್ಯಕ್ತಪಡಿಸಿದರು.  ರಾಜ್ಯದಲ್ಲಿ ಯಾವುದೇ ಕೈಗಾರಿಕೆಗಳು ಬಾಗಿಲು ಮುಚ್ಚಲು ಅವಕಾಶ ನೀಡುವುದಿಲ್ಲ. ದಿನದ 24 ಗಂಟೆಯೂ ಕೈಗಾರಿಕಾ ಚಟುವಟಿಕೆ ನಡೆಸುವುದಕ್ಕೆ ಪೂರಕವಾದ ವಾತಾವರಣ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಹೂಡಿಕೆ ಸಮಾವೇಶ ಮುಂದೂಡಿಕೆಯಾಗುವ ಸುಳಿವನ್ನು ಸಚಿವ ನಿರಾಣಿ ನೀಡಿದರು. ಮುಂದಿನ ಫೆಬ್ರವರಿಯಲ್ಲಿ ಹೂಡಿಕೆ ಸಮಾವೇಶ ನಡೆಸಲು ಉದ್ದೇಶಿಸಲಾಗಿತ್ತು. ಕೋವಿಡ್‌ ಸಂದರ್ಭದಲ್ಲಿಯಶಸ್ವಿಯಾಗಿ ನಿಭಾಯಿಸಲು ಆಗುತ್ತದೋ ಇಲ್ಲವೋ ಗೊತ್ತಿಲ್ಲ. ಸಿಎಂ ಜತೆಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ನಿರಾಣಿ ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com