ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ (ಪಿಟಿಐ ಚಿತ್ರ)
ರಾಜ್ಯ
ಕೋವಿಡ್-19: ಬೆಂಗಳೂರಿನಲ್ಲಿ ಆಗಸ್ಟ್ 30 ರ ವರೆಗೆ ನೈಟ್ ಕರ್ಫ್ಯೂ ವಿಸ್ತರಣೆ: ಕಮಲ್ ಪಂತ್ ಆದೇಶ
ಕೋವಿಡ್-19 ಸಾಂಕ್ರಾಮಿಕದ ಹಿನ್ನಲೆಯಲ್ಲಿ ಆಗಸ್ಟ್ 30 ರ ವರೆಗೆ ನೈಟ್ ಕರ್ಫ್ಯೂ ವಿಸ್ತರಣೆ ಮಾಡಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕದ ಹಿನ್ನಲೆಯಲ್ಲಿ ಆಗಸ್ಟ್ 30 ರ ವರೆಗೆ ನೈಟ್ ಕರ್ಫ್ಯೂ ವಿಸ್ತರಣೆ ಮಾಡಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಆಗಸ್ಟ್ 30 ರ ವರೆಗೆ ನೈಟ್ ಕರ್ಫ್ಯೂ ವಿಸ್ತರಿಸಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಇಂದು ಆದೇಶ ಹೊರಡಿಸಿದ್ದು, ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯ ವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿ ಇರಲಿದೆ ಎಂದು ಹೇಳಲಾಗಿದೆ.
ನಗರದಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯಾದಂತ ನೈಟ್ ಕರ್ಫ್ಯೂ ವಿಧಿಸಲಾಗಿತ್ತು. ಜೊತೆಗೆ, ಗಡಿಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಕೂಡ ಹಾಕಲಾಗಿತ್ತು. ನೈಟ್ ಕರ್ಫ್ಯೂ ವಿಧಿಸಿರುವುದರಿಂದ ಮೆಟ್ರೋ ಸಂಚಾರ ಅವಧಿಯಲ್ಲಿ ಬದಲಾವಣೆ ಮಾಡಲಾಗಿತ್ತು. ಇದೀಗ, ರಾತ್ರಿ ಕರ್ಫ್ಯೂ ಆದೇಶವನ್ನು ಈ ತಿಂಗಳ ಅಂತ್ಯದ ವರೆಗೆ ಮುಂದುವರಿಸಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ