ರಾಜ್ಯ

ಗೋಕಾಕ್‍ ಬಳಿ ರಸ್ತೆ ಅಪಘಾತ: ಮೂವರು ಸಾವು

ಗೋಕಾಕ್‍ ಬಳಿ ರಸ್ತೆ ಅಪಘಾತ: ಮೂವರು ಸಾವು
ಅಪಘಾತ
Published On :

ಬೆಳಗಾವಿ: ಜಿಲ್ಲೆಯ ಗೋಕಾಕ್‍ ತಾಲ್ಲೂಕಿನಲ್ಲಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ.

ಈ ಘಟನೆ ಘಟಪ್ರಭಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಹುನಶ್ಯಾಲ್‍ ಗ್ರಾಮದಲ್ಲಿ ಕಾರ್ ವೊಂದು ಗೋಕಾಕ್‍ ಕಡೆ ತೆರಳುತ್ತಿದ್ದ ಎರಡು ದ್ವಿಚಕ್ರ ವಾಹನಗಳ ಮೇಲೆ ಹರಿದು ಈ ಅವಘಡ ಸಂಭವಿಸಿದೆ. ಅತಿ ವೇಗವಾಗಿ ಬರುತ್ತಿದ್ದ ಸ್ವಿಫ್ಟ್ ಕಾರೊಂದು 2 ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ 3  ಜನ ಮೃತಪಟ್ಟ ದುರ್ಘಟನೆ ನಡೆದಿದೆ.

ಗೋಕಾಕದಿಂದ ಹುಣಶ್ಯಾಳದ ಕಡೆ ಹೊರಟಿದ್ದ, ಎರಡು ಬೈಕ್ ಗಳಿಗೆ ಎದುರಿಗೆ ಮೂಡಲಗಿಯಿಂದ ಗೋಕಾಕ ಕಡೆ ಬರುತ್ತಿದ್ದ ಸ್ವೀಪ್ಟ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸೇರಿದಂತೆ ಮೂವರು ದುರ್ಮರಣಕ್ಕಿಡಾಗಿದ್ದಾರೆ.

ಮೃತ ದುರ್ದೈವಿಗಳನ್ನು ಹುಣಶ್ಯಾಳದ ನಾಗಪ್ಪ ಮಗ್ಯಾಪ್ಪಗೋಳ, ಗೋಪಾಲ ಮತ್ನಾಳ ಎಂದು ಗುರುತಿಸಲಾಗಿದ್ದು, ಓರ್ವ ಮಹಿಳೆ ಕೂಡ ಮೃತರಾಗಿದ್ದಾರೆ. ಇವರ ಬಗ್ಗೆ ಇನ್ನಷ್ಟೇ ಮಾಹಿತಿ ಸಿಗಬೇಕಿದೆ.

ಸ್ವಿಫ್ಟ್ ಕಾರಿನ ಚಾಲಕ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸುತ್ತಿದ್ದ ಎಂದು ಹೇಳಲಾಗುತ್ತಿದ್ದು, ಘಟನೆ ನಡೆದ ತಕ್ಷಣ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟಪ್ರಭಾ ಪೊಲೀಸರು ಪ್ರಾಥಮಿಕ ತನಿಖೆಯನ್ನು ನಡೆಸುತ್ತಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.