ಕಲಬುರಗಿ: ಕೋವಿಡ್ ನಿಯಮ ಉಲ್ಲಂಘಿಸಿದ ಬಿಜೆಪಿ: ಜನಾರ್ಶೀವಾದ ಯಾತ್ರೆ ಆಯೋಜಕರ ವಿರುದ್ಧ ಕೇಸ್

ಕೋವಿಡ್ -19 ನಿಯಮಗಳನ್ನು ಉಲ್ಲಂಘಿಸಿ ಸಾರ್ವಜನಿಕ ಕಾರ್ಯಕ್ರಮ ಆಯೋಜಿಸಿದ್ದಕ್ಕಾಗಿ ಜನಾರ್ಶೀವಾದ ಯಾತ್ರೆಯ ಆಯೋಜಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಕಲಬುರಗಿ ತಹಶೀಲ್ದಾರ್...
ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು
ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು

ಕಲಬುರಗಿ: ಕೋವಿಡ್ -19 ನಿಯಮಗಳನ್ನು ಉಲ್ಲಂಘಿಸಿ ಸಾರ್ವಜನಿಕ ಕಾರ್ಯಕ್ರಮ ಆಯೋಜಿಸಿದ್ದಕ್ಕಾಗಿ ಜನಾರ್ಶೀವಾದ ಯಾತ್ರೆಯ ಆಯೋಜಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಕಲಬುರಗಿ ತಹಶೀಲ್ದಾರ್ ಅವರು ಸೆಕ್ಟರಲ್ ಮ್ಯಾಜಿಸ್ಟ್ರೇಟ್ ಮತ್ತು ನಗರದ ಬ್ರಹ್ಮಪುರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಿಗೆ ಸೂಚನೆ ನೀಡಿದ್ದಾರೆ.

ಈ ಸಂಬಂಧ ವಾರ್ಡ್ ಸಂಖ್ಯೆ 41, 42 ಮತ್ತು 43 ರ ಸೆಕ್ಟೋರಲ್ ಮ್ಯಾಜಿಸ್ಟ್ರೇಟ್ ಮತ್ತು ಸರ್ಕಲ್ ಇನ್ಸ್‌ಪೆಕ್ಟರ್ ಗೆ ತಹಶೀಲ್ದಾರ್ ಪ್ರಕಾಶ್ ಕುದ್ರೆ ಅವರು ಪತ್ರ ಬರೆದಿದ್ದು, ಬಿಜೆಪಿ ಸ್ಥಳೀಯ ಘಟಕವು ಸೋಮವಾರ ಸಂಜೆ ಕೋವಿಡ್ -19 ನಿಯಮಗಳನ್ನು ಉಲ್ಲಂಘಿಸಿ ಜನಾಶೀರ್ವಾದ ಯಾತ್ರೆಯನ್ನು ಆಯೋಜಿಸಿದೆ ಎಂದು ಹೇಳಿದ್ದಾರೆ. 

ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ಈ ಯಾತ್ರೆಯಲ್ಲಿ ಭಾಗವಹಿಸಿದ್ದರು. ಜಿಲ್ಲಾಡಳಿತದ ಅನುಮತಿಯಿಲ್ಲದೆ ಆಯೋಜಕರು ಸೋಮವಾರ ವೀರಶೈವ ಕಲ್ಯಾಣ ಕರ್ನಾಟಕ ಮಂಟಪದಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನು(ಜನಾಶೀರ್ವಾದ ಯಾತ್ರೆ) ಏರ್ಪಡಿಸಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಕೋವಿಡ್ ನೈಟ್ ಕರ್ಫ್ಯೂ ಜಾರಿಯಲ್ಲಿದ್ದರೂ ಕೋವಿಡ್ -19 ಪ್ರೋಟೋಕಾಲ್ ಉಲ್ಲಂಘಿಸಿ ಕಾರ್ಯಕ್ರಮವನ್ನು ರಾತ್ರಿಯವರೆಗೆ ಮುಂದುವರೆಸಲಾಗಿದೆ. 

ಕಲಬುರಗಿ ಜಿಲ್ಲಾಧಿಕಾರಿಗಳ ಮೌಖಿಕ ಸೂಚನೆಯಂತೆ ನಾನು ಈ ಪತ್ರ ಬರೆಯುತ್ತಿದ್ದು, ಕೋವಿಡ್ -19 ಪ್ರೋಟೋಕಾಲ್‌ಗಳ ಉಲ್ಲಂಘಿಸಿದ ಕಾರ್ಯಕ್ರಮದ ಆಯೋಜಕರ ವಿರುದ್ಧ ಪ್ರಕರಣ ದಾಖಲಿಸುವಂತೆ ತಹಶೀಲ್ದಾರ್ ಪ್ರಕಾಶ್ ಕುದ್ರೆ ಅವರು ಪೊಲೀಸರಿಗೆ ಸೂಚಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕಲಬುರಗಿ ಪೊಲೀಸ್ ಆಯುಕ್ತ ರವಿಕುಮಾರ್, ಪೊಲೀಸ್ ಇಲಾಖೆಯು ತಹಶೀಲ್ದಾರರಿಂದ ಪತ್ರವನ್ನು ಸ್ವೀಕರಿಸಿದ್ದು, ಈ ವಿಷಯವನ್ನು ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ.

ಏತನ್ಮಧ್ಯೆ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಾ.ಶರಣ ಪ್ರಕಾಶ್ ಪಾಟೀಲ್ ಅವರು, ಕಾರ್ಯಕ್ರಮದ ಆಯೋಜಕರ ವಿರುದ್ಧ ತಕ್ಷಣವೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವಂತೆ ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com