ಮಕ್ಕಳ ಮೇಲಿನ ಕೋವಿಡ್ ಪರಿಣಾಮ ಅತ್ಯಲ್ಪವಾಗಿರಲಿದ್ದು, ಆತಂಕದ ಆಗತ್ಯವಿಲ್ಲ: ಸಚಿವ ನಾಗೇಶ್

ಮಕ್ಕಳ ಮೇಲಿನ ಕೋವಿಡ್ ಪರಿಣಾಣ ಅತ್ಯಲ್ಪವಾಗಿರಲಿದ್ದು, ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿಸಿ.ನಾಗೇಶ್ ಅವರು ಹೇಳಿದ್ದಾರೆ. 
ಸಚಿವ ನಾಗೇಶ್
ಸಚಿವ ನಾಗೇಶ್

ತುಮಕೂರು: ಮಕ್ಕಳ ಮೇಲಿನ ಕೋವಿಡ್ ಪರಿಣಾಣ ಅತ್ಯಲ್ಪವಾಗಿರಲಿದ್ದು, ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿಸಿ.ನಾಗೇಶ್ ಅವರು ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ, ರಾಜ್ಯದಲ್ಲಿ 8.75 ಲಕ್ಷ ವಿದ್ಯಾರ್ಥಿಗಳು ಎಸ್ಎಸ್ಎಲ್'ಸಿ ಪರೀಕ್ಷೆ ನಡೆಸಿದ್ದಾರೆ. ಈ ಹಿಂದೆ ಮಕ್ಕಳಿಗೆ ಸೋಂಕು ತಗುವ ಸಾಧ್ಯತೆಗಳಿವೆ ಎಂದು ತಜ್ಞರು ಹೇಳಿದ್ದರು. ಆದರೀಗ ಅಷ್ಟಾಗಿ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಕೋವಿಡ್ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. 

ಆಗಸ್ಟ್ 23 ರಿಂದ ಶಾಲೆಗಳು ಪ್ರಾರಂಭವಾಗುತ್ತವೆ 9 ರಿಂದ 12 ನೇ ತರಗತಿವರೆಗೆ ಶಾಲಾ-ಕಾಲೇಜುಗಳನ್ನು ಆರಂಭಿಸುತ್ತೇವೆ. ತರಗತಿ ನಡೆಸಲು ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ. ಜಿಲ್ಲಾಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ್ದೇನೆ. ಎರಡು ಜಿಲ್ಲೆ ಹೊರತು ಪಡಿಸಿ ಉಳಿದ ಕಡೆ ಶಾಲೆ ಆರಂಭ ಮಾಡುತ್ತೇವೆ.

ಮಕ್ಕಳಿಗೆ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿದ್ದೇವೆ. ಮನೆಯಿಂದ ಬಂದು ಮನೆಗೆ ವಾಪಸಾಗುವವರೆಗೆ ಕಡ್ಡಾಯವಾಗಿ ಮಾಸ್ಕ್‌ ಧರಿಸಿರಲೇ ಬೇಕು. ಮಕ್ಕಳು ಮಾಸ್ಕ್ ಹಾಕಿಕೊಳ್ಳುವುದನ್ನು ಶಿಕ್ಷಕರು ನೋಡಿಕೊಳ್ಳಬೇಕು. ಜೊತೆಗೆ ಶಿಕ್ಷಕರಿಂದಲೂ ಶಾಲೆ ಆರಂಭಿಸಲಿಕ್ಕೆ ಬೆಂಬಲವನ್ನು ಕೊಟ್ಟಿದ್ದಾರೆ. ಶಿಕ್ಷಕರ ಜೊತೆ ಕೈಜೋಡಿಸುವಂತೆ ಅವರಿಗೆ ಸೂಚನೆ ಕೊಡಲಾಗಿದೆ. ಶಾಲೆಗಳ ಕೊಠಡಿಗಳನ್ನು ಸ್ಯಾನಿಟೈಸ್ ಮಾಡುವುದು, ಮಕ್ಕಳಿಗೆ ಮಾಸ್ಕ್ ಒದಗಿಸುವುದನ್ನು ಸ್ಥಳೀಯ ಮಟ್ಟದಲ್ಲಿ ಗ್ರಾಮ ಪಂಚಾಯಿತಿಗಳು ನೋಡಿಕೊಳ್ಳುತ್ತವೆ ಎಂದು ತಿಳಿಸಿದ್ದಾರೆ. 

ಜೊತೆಗೆ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಲೇಬೇಕು ಎಂಬ ಪೋಷಕರಿಗೆ ಸೂಚಿಸಿಲ್ಲ. ಆನ್‌ಲೈನ್‌ ಅಥವಾ ಆಫ್‌ಲೈನ್‌ ಯಾವುದರಲ್ಲಾದರೂ ತರಗತಿಗೆ ಹಾಜರಾಗಬಹುದು. ಆ ಆಯ್ಕೆಯನ್ನು ಪೋಷಕರ ಇಚ್ಚೆಗೆ ಬಿಟ್ಟಿದ್ದೇವೆ. ಸೋಂಕು ಕಂಡು ಬಂದರೆ ಅದನ್ನು ತಡೆದು ನಿಲ್ಲಿಸುವ ಶಕ್ತಿ ಸರ್ಕಾರಕ್ಕಿದೆ. ಒಬ್ಬ ವಿದ್ಯಾರ್ಥಿಯಲ್ಲಿ ಸೋಂಕು ಕಂಡು ಬಂದರೂ ಆ ಶಾಲೆಯನ್ನು ವಾರದವರೆಗೂ ಬಂದ್ ಮಾಡಿ, ಸ್ಯಾನಿಟೈಸ್ ಮಾಡಿ ಪುನರಾರಂಭ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com