ಶಶಿಕಲಾ ಜೊಲ್ಲೆ
ಶಶಿಕಲಾ ಜೊಲ್ಲೆ

ಸರ್ಕಾರಿ ದೇವಸ್ಥಾನಗಳ ಆಸ್ತಿ ಸಮೀಕ್ಷೆ ನಡೆಸಿ: ಅಧಿಕಾರಿಗಳಿಗೆ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ

ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳ ಆಸ್ತಿ ಸಮೀಕ್ಷೆ ನಡೆಸುವಂತೆ ಮುಜರಾಯಿ, ವಕ್ಪ್ ಮತ್ತು ಹಜ್ ಸಚಿವೆ ಶಶಿಕಲಾ ಜೊಲ್ಲೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳ ಆಸ್ತಿ ಸಮೀಕ್ಷೆ ನಡೆಸುವಂತೆ ಮುಜರಾಯಿ, ವಕ್ಪ್ ಮತ್ತು ಹಜ್ ಸಚಿವೆ ಶಶಿಕಲಾ ಜೊಲ್ಲೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆಯಾದ ಬಳಿಕ ವಿಧಾನಸೌಧದಲ್ಲಿ ನೂತನ ಕಚೇರಿಗೆ ಪೂಜೆ ಸಲ್ಲಿಸಿ ಬಳಿಕ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ಎ. ಬಿ ಮತ್ತು ಸಿ ದರ್ಜೆಯ ದೇವಸ್ಥಾನಗಳ ಜಿಲ್ಲಾವಾರು ದೇವಸ್ಥಾನಗಳ ಮಾಹಿತಿ ಪಡೆದುಕೊಂಡು,  ಆಸ್ತಿ ಬಗ್ಗೆ ಸಮೀಕ್ಷೆ ನಡೆಸಿ, ದೇವಸ್ಥಾನಗಳ ಆಸ್ತಿ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು. ಇಲಾಖೆ ವ್ಯಾಪ್ತಿಗೆ ಬರುವ ದೇವಸ್ಥಾನಗಳಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ಅಲ್ಲದೆ ಭಕ್ತರಿಗೆ, ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದರು.

ರಾಜ್ಯ ಸರ್ಕಾರದ ಮಹತ್ವದ ಸಾಮೂಹಿಕ ವಿವಾಹ ಯೋಜನೆ ದಕ್ಷಿಣ ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದ್ದು, ಈ ಯೋಜನೆಯ ಬಗ್ಗೆ ವ್ಯಾಪಕ ಪ್ರಚಾರ ನೀಡಿ, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಯೋಜನೆ ಯಶಸ್ವಿಗೆ ಕ್ರಮ ಕೈಗೊಳ್ಳುವಂತೆ ಜೊಲ್ಲೆ ಅಧಿಕಾರಿಗಳಿಗೆ ಸೂಚಿಸಿದರು.

Related Stories

No stories found.

Advertisement

X
Kannada Prabha
www.kannadaprabha.com