ಬೆಂಗಳೂರು: 20 ಕೋಟಿ ರೂ. ಮೌಲ್ಯದ ತಿಮಿಂಗಲದ ವಾಂತಿ 'ಅಂಬರ್ ಗ್ರಿಸ್' ವಶ, ಇಬ್ಬರ ಬಂಧನ!

ನಿಷೇಧಿತ ಅಂಬರ್ ಗ್ರಿಸ್ ಗಟ್ಟಿಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರೂ ಆರೋಪಿಗಳನ್ನು ಕೇಂದ್ರ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಅಂಬರ್ ಗ್ರಿಸ್
ಅಂಬರ್ ಗ್ರಿಸ್

ಬೆಂಗಳೂರು: ನಿಷೇಧಿತ ಅಂಬರ್ ಗ್ರಿಸ್ ಗಟ್ಟಿಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರೂ ಆರೋಪಿಗಳನ್ನು ಕೇಂದ್ರ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಮಂಗಳವಾರ ನಗರದ ಎನ್.ಆರ್ ರಸ್ತೆಯಲ್ಲಿರುವ ಲೂಸಿಯಾ ಲಾಡ್ಜ್ ನ ರೂಂನಲ್ಲಿ ಇಬ್ಬರೂ ವ್ಯಕ್ತಿಗಳು ಅಂಬರ್ ಗ್ರಿಸ್ ಗಟ್ಟಿ ಇಟ್ಟುಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎಂದು ಭಾತ್ಮೀದಾರರಿಂದ ಬಂದ ಮಾಹಿತಿ ಮೇರೆಗೆ
ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು.

ನಿಷೇಧಿತ ವಸ್ತುಗಳನ್ನು ಮಾರಾಟ ಮಾಡಲು ಬಂದಿದ್ದ ಇಬ್ಬರೂ ಆರೋಪಿಗಳನ್ನು ಬಂಧಿಸಿ, ಅವರ ವಶದಲ್ಲಿದ್ದ 2.5 ಕೆಜಿ ಅಂಬರ್ ಗ್ರಿಸ್ ಗಟ್ಟಿ ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ ಜೆ ಪಾರ್ಕ್ ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳನ್ನು ನೀಡಿದ ಮಾಹಿತಿ ಮೇರೆಗೆ, ಹೊಸಕೋಟೆ ಟೌನ್‍ನಲ್ಲಿ ಇನ್ನು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ಅವರುಗಳು ವಶದಲ್ಲಿ ಇಟ್ಟುಕೊಂಡಿದ್ದ 17.5 ಕೆಜಿ ಅಂಬರ್ ಗ್ರಿಸ್ ಗಟ್ಟಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಂಧಿತರಿಂದ ಸುಮಾರು 20 ಕೋಟಿ ರೂ.ಮೌಲ್ಯದ 20 ಕೆಜಿ ಅಂಬರ್ ಗ್ರಿಸ್ ಹಾಗೂ ಕೃತ್ಯಕ್ಕೆ ಬಳಸುತ್ತಿದ್ದ 4 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಉಡುಪಿಯ ಮಲ್ಪೆ ಬೀಚ್‍ನಲ್ಲಿ ಅಂಬರ್ ಗ್ರಿಸ್ ಗಟ್ಟಿಗಳನ್ನು ಸಂಗ್ರಹಿಸಿಟ್ಟು, ಸುಲಭವಾಗಿ ಹಣ ಸಂಪಾದಿಸುತ್ತಿರುವುದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಲಸೂರು ಗೇಟ್ ಉಪವಿಭಾಗದ ಎಸಿಪಿ ನಜ್ಮಾ ಫಾರೂಖಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com