ರಾಜ್ಯ

ಕೌಟುಂಬಿಕ ಕಲಹ: ಬೆಂಗಳೂರಿನಲ್ಲಿ ಕೇರಳ ಮಹಿಳೆ ಆತ್ಮಹತ್ಯೆಗೆ ಶರಣು

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಈಜೀಪುರದಲ್ಲಿ ನಡೆದಿದೆ.

ಕೌಟುಂಬಿಕ ಕಲಹ: ಬೆಂಗಳೂರಿನಲ್ಲಿ ಕೇರಳ ಮಹಿಳೆ ಆತ್ಮಹತ್ಯೆಗೆ ಶರಣು
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಈಜೀಪುರದಲ್ಲಿ ನಡೆದಿದೆ.

ಕೇರಳದ ಕೋಜಿಕ್ಕೋಡ್ ನಿವಾಸಿ 27 ವರ್ಷದ ಸ್ಮಿತಾ ಸದಾನಂದನ್ ಮೃತ ಮಹಿಳೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವಿಶು ಎಂಬಾತನನ್ನು ವಿವಾಹವಾಗಿದ್ದರು. ಈ ದಂಪತಿಗೆ ಮಗನಿದ್ದಾನೆ. ಎಚ್ ಆರ್ ಕೆಲಸ ಮಾಡುತ್ತಿದ್ದ ಆಕೆ ಇತ್ತೀಚೆಗಷ್ಟೆ ರಾಜಿನಾಮೆ ನೀಡಿದ್ದರು.

ಗುರುವಾರ ರಾತ್ರಿ ದಂಪತಿ ಜಗಳವಾಡಿಕೊಂಡು ಬೇರೆ ಬೇರೆ ಕೊಠಡಿಯಲ್ಲಿ ಮಲಗಿದ್ದರು, ಶುಕ್ರವಾರ ಬೆಳಗ್ಗೆ ಆಕೆ ನೇಣಿಗೆ ಶರಣಾಗಿರುವುದನ್ನು ವಿಶು ನೋಡಿದ್ದಾನೆ. ಆಕೆ ವಿಚ್ಛೇದನ ಬಯಸಿದ್ದಳು, ಆದರೆ ಆಕೆಯ ಪತಿ ಡೈವೋರ್ಸ್ ನೀಡಲು ಒಪ್ಪಿರಲಿಲ್ಲ ಎಂದು ಪ್ರಾಥಮಿಕ ಹಂತದ ತನಿಖೆಯಿಂದ ತಿಳಿದು ಬಂದಿದೆ. ಆಕೆಯ ಪೋಷಕರು ಕೇರಳದಿಂದ ಬರುತ್ತಿದ್ದು, ಅವರಿಗಾಗಿ ಕಾಯುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.