ಮಂಗಳೂರಿನಲ್ಲಿ ಎನ್ಐಎ ಸ್ಥಾಪನೆ, ಕೇಂದ್ರದೊಂದಿಗೆ ಮಾತುಕತೆ: ಆರಗ ಜ್ಞಾನೇಂದ್ರ

ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ-ಎನ್ಐಎ ಸ್ಥಾಪನೆ ಮಾಡುವ ಸಂಬಂದ ಕೇಂದ್ರ ಸರ್ಕಾರದೊಂದಿಗೆ ಶೀಘ್ರ ಸಮಾಲೋಚನೆ ನಡೆಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ
Updated on: 

ಮಂಗಳೂರು: ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ-ಎನ್ಐಎ ಸ್ಥಾಪನೆ ಮಾಡುವ ಸಂಬಂದ ಕೇಂದ್ರ ಸರ್ಕಾರದೊಂದಿಗೆ ಶೀಘ್ರ ಸಮಾಲೋಚನೆ ನಡೆಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಯೋತ್ಪಾದನೆ ಮಟ್ಟಹಾಕಲು ಕೇಂದ್ರ ದಿಟ್ಟ ಕ್ರಮ ಕೈಗೊಳ್ಳುತ್ತಿದೆ. ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಸ್ಥಾಪನೆ ಬೇಡಿಕೆ ಬಹಳ ದಿನಗಳಿಂದಲೂ ಕೇಳಿಬರುತ್ತಿದ್ದು, ಇದನ್ನು ಸಕಾರಗೊಳಿಸುವ ಉದ್ದೇಶದಿಂದ ಕೇಂದ್ರದೊಂದಿಗೆ ಮಾತುಕತೆ ನಡೆಸಲಾಗುವುದು ಎಂದರು.

ಅಫ್ಘಾನಿಸ್ಥಾನದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸರ್ಕಾರ ವ್ಯವಸ್ಥೆ ಮಾಡುತ್ತಿದೆ. ರಾಜ್ಯದ ನೋಡಲ್ ಅಧಿಕಾರಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಉಮೇಶ್ ಅವರನ್ನು ನೇಮಕ ಮಾಡಲಾಗಿದೆ. ಅವರು ಈ ಹಿಂದೆ ವಿದೇಶದಲ್ಲಿ ಅತಂತ್ರರಾಗಿದ್ದ ಕನ್ನಡಿಗರನ್ನು ಅವರು ಕರೆ ತಂದಿದ್ದಾರೆ. ಸಂಕಷ್ಟದಲ್ಲಿರುವವರು ಸಂಪರ್ಕಿಸುವಂತೆ ತಿಳಿಸಲಾಗಿದೆ ಎಂದು ಹೇಳಿದರು. 

ಕರಾವಳಿಯಲ್ಲಿ ಕೆಲವು ವರ್ಷಗಳಿಂದ ಭಯೋತ್ಪಾದಕ ಚಟುವಟಿಕೆ ನಡೆಯುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಚಟುವಟಿಕೆಗಳಿ ಮೇಲೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿದ್ದೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com