ಕೋವಿಡ್-19: ಮಾರುಕಟ್ಟೆ ಸೇರಿ ಜನನಿಬಿಡ ಪ್ರದೇಶಗಳಲ್ಲಿ ಪರಿಣಾಮಕಾರಿ ಪರೀಕ್ಷೆಗೆ ಬಿಬಿಎಂಪಿ ಸೂಚನೆ

ಮಾರುಕಟ್ಟೆ, ವಾಣಿಜ್ಯ ಪ್ರದೇಶಗಳು, ಕೈಗಾರಿಕೆ ಪ್ರದೇಶ, ಅಪಾರ್ಟ್'ಮೆಂಟ್ ಕಾಂಪ್ಲೆಕ್ಸ್ ಗಳು ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಪರಿಣಾಮಕಾರಿಯಾಗಿ ಪರೀಕ್ಷೆ ನಡೆಸುವಂತೆ ಸಿಬ್ಬಂದಿಗಳು ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಬಿಬಿಎಂಪಿ ಸೂಚನೆ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮಾರುಕಟ್ಟೆ, ವಾಣಿಜ್ಯ ಪ್ರದೇಶಗಳು, ಕೈಗಾರಿಕೆ ಪ್ರದೇಶ, ಅಪಾರ್ಟ್'ಮೆಂಟ್ ಕಾಂಪ್ಲೆಕ್ಸ್ ಗಳು ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಪರಿಣಾಮಕಾರಿಯಾಗಿ ಪರೀಕ್ಷೆ ನಡೆಸುವಂತೆ ಸಿಬ್ಬಂದಿಗಳು ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಬಿಬಿಎಂಪಿ ಸೂಚನೆ ನೀಡಿದೆ. 

ಪೀಣ್ಯ ಇಂಡಸ್ಟ್ರೀಸ್ ಅಸೋಸಿಯೇಶನ್ ಶನಿವಾರ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು, ಹಬ್ಬಗಳ ಸೀಸನ್ ಆರಂಭವಾಗಿರುವ ಹಿನ್ನೆಲೆಯಲ್ಲಿ ಜನನಿಬಿಡ ಪ್ರದೇಶಗಳಲ್ಲಿ ಪರಿಣಾಮಕಾರಿ ರೀತಿಯಲ್ಲಿ ಪರೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. 

ರ್ಯಾಂಡಮ್ ಪರೀಕ್ಷೆಗಳು ಹಾಗೂ ಲಸಿಕೆ ಅಭಿಯಾನವನ್ನು ಪರಿಣಾಮಕಾರಿಯಾಗಿ ನಡೆಸಲಾಗುತ್ತಿದೆ. ಈಗಾಗಲೇ ಪ್ರತೀವಾರ್ಡ್ ನಲ್ಲಿ ಪ್ರತೀನಿತ್ಯ 400 ಜನರಿಗೆ ಲಸಿಕೆ ನೀಡುವ ಗುರಿಯನ್ನು ಸಿಬ್ಬಂದಿಗಳಿಗೆ ನೀಡಲಾಗಿದೆ. ಪ್ರಮುಖವಾಗಿ ದಾಸರಹಳ್ಳಿಯಂತಹ ವಲಸೆ ಕಾರ್ಮಿಕರು ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚು ಜನರಿಗೆ ಲಸಿಕೆ ನೀಡುವಂತೆ, ಪರೀಕ್ಷೆ ನಡೆಸುವಂತೆ ಸೂಚಿಸಲಾಗಿದೆ. ಈ ಮಟ್ಟದ ಲಸಿಕೆ ಗುರಿ ತಲುಪಲು ಪ್ರತೀನಿತ್ಯ 25 ಸಾವಿರ ಲಸಿಕೆಗಳು ಬೇಕಾಗುತ್ತದೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಸರಬರಾಜು ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. 

ಸಂವಾದ ಕಾರ್ಯಕ್ರಮದಲ್ಲಿ ರಸ್ತೆ ಗುಂಡಿಗಳು, ಬೀದಿ ದೀಪಗಳ ಸಮಸ್ಯೆ, ಕಸದ ನಿರ್ವಹಣೆ ಹಾಗೂ ಚರಂಡಿ ನೀರು ಸಮಸ್ಯೆಗಳ ಕುರಿತು ಮಾತುಕತೆ ನಡೆಸಲಾಗಿದೆ. ರಸ್ತೆಗಳಲ್ಲಿ ಬಿದ್ದಿರುವ ಎಲ್ಲಾ ಗುಂಡಿಗಳನ್ನು ವಾರದೊಳಗೆ ಮುಚ್ಚುವಂತೆ ಸೂಚನೆ ನೀಡಲಾಗಿದೆ. ಉದ್ಯಮ ಪ್ರದೇಶಗಳಿಗೆ ತೆರಳುವ ಪ್ರಮುಖ ರಸ್ತೆಗಳಿಗೆ ಪಟ್ಟಿ ಹೆಚ್ಚಿನ ಆದ್ಯತೆ ನೀಡಬೇಕು. ಕೂಡಲೇ ಆ ಅಲ್ಲಿನ ಗುಂಡಿಗಳನ್ನು ಮುಚ್ಚಬೇಕು. ಬೀದಿ ದೀಪಗಳ ಸಮಸ್ಯೆಗಳನ್ನೂ ಕೂಡಲೇ ಪರಿಹರಿಸುವಂತೆಯೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com