ಸದಾಶಿವನಗರದಲ್ಲಿ ಚಲಿಸುತ್ತಿದ್ದ ಕಾರಿಗೆ ಬೆಂಕಿ: ಮೂವರು ಅಪಾಯದಿಂದ ಪಾರು

ಖಾಸಗಿ ಕಂಪನಿ ಉದ್ಯೋಗಿ ಚಲಾಯಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸದಾಶಿವನಗರದ ಕಾವೇರಿ ಥಿಯೇಟರ್ ಜಂಕ್ಷನ್ ಬಳಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಹೊತ್ತಿ ಉರಿದ ಕಾರು
ಹೊತ್ತಿ ಉರಿದ ಕಾರು
Updated on: 

ಬೆಂಗಳೂರು: ಖಾಸಗಿ ಕಂಪನಿ ಉದ್ಯೋಗಿ ಚಲಾಯಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸದಾಶಿವನಗರದ ಕಾವೇರಿ ಥಿಯೇಟರ್ ಜಂಕ್ಷನ್ ಬಳಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಕಾರಿನ ಬ್ಯಾಟರಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅಪಘಾತಕ್ಕೆ ಕಾರಣವಾಗಿದೆ ಎಂದು ಶಂಕಿಸಲಾಗಿದೆ. ಕಾರನ್ನು ಚಲಾಯಿಸುತ್ತಿದ್ದ  ಮಾಲೀಕ ಕೆ ಉದಯ್ ಕುಮಾರ್ ಅವರ ಜೊತೆಗೆ ಪತ್ನಿ ಮತ್ತು ಸಂಬಂಧಿ ಅವರೊಂದಿಗೆ ಇದ್ದರು. ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ.

ಒಂದು ವಾರದ ಹಿಂದೆಯಷ್ಟೇ ಕಾರನ್ನು ಖರೀದಿಸಲಾಗಿತ್ತು, ಕಾರು ಯಲಹಂಕದ ಕಡೆ ಹೋಗುತ್ತಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯ ವಿಡಿಯೋ ವೈರಲ್ ಆಗಿದ್ದು ಕೆಲ ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಈ ವಿಭಾಗದ ಇತರ ಸುದ್ದಿ

No stories found.

X
Kannada Prabha
www.kannadaprabha.com