ಕೊರೋನಾ ಪರೀಕ್ಷೆ ನಿರ್ವಹಣೆಗೆ ಹೊಸ ವ್ಯವಸ್ಥೆ: ಡಾ. ಕೆ. ಸುಧಾಕರ್

ಕೊರೋನ  ಸಂಭವನೀಯ ಮೂರನೇ ಅಲೆಯನ್ನು ತಡೆಗಟ್ಟುವ ಸಲುವಾಗಿ ಪರೀಕ್ಷೆ ನಿರ್ವಹಣೆಗೆ ನೂತನ ವ್ಯವಸ್ಥೆ ರೂಪಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. 
ಡಾ. ಕೆ. ಸುಧಾಕರ್
ಡಾ. ಕೆ. ಸುಧಾಕರ್

ಬೆಂಗಳೂರು: ಕೊರೋನ  ಸಂಭವನೀಯ ಮೂರನೇ ಅಲೆಯನ್ನು ತಡೆಗಟ್ಟುವ ಸಲುವಾಗಿ ಪರೀಕ್ಷೆ ನಿರ್ವಹಣೆಗೆ ನೂತನ ವ್ಯವಸ್ಥೆ ರೂಪಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ಜಿಲ್ಲಾವಾರು ಪರೀಕ್ಷೆಗಳನ್ನು 1.75 ಲಕ್ಷಕ್ಕೆ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಒಟ್ಟು ಪರೀಕ್ಷೆಗಳಲ್ಲಿ ಶೇಕಡಾ  10 ರಷ್ಟು ಪರೀಕ್ಷೆಗಳನ್ನು ಕಡ್ಡಾಯವಾಗಿ 18 ವರ್ಷ ಕೆಳಗಿನ ಮಕ್ಕಳಿಗೆ ಮಾಡುವಂತೆಯೇ ಆರೋಗ್ಯ ಮತ್ತು ಕಲ್ಯಾಣ ಇಲಾಖೆಯ ಸಿಬ್ಬಂದಿಗಳಿಗೆ  ಸ್ಪಷ್ಟವಾಗಿ ಸೂಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಹರಡುವಿಕೆ ಮೇಲೆ ನಿಗಾ ವಹಿಸಲು ಒಟ್ಟಾರೇ ಪರೀಕ್ಷೆಗಳಲ್ಲಿ ಶೇಕಡಾ 50 ರಷ್ಟು ಪರೀಕ್ಷೆಗಳನ್ನು ತಾಲೂಕ್ ಕೇಂದ್ರ ಪ್ರದೇಶದ ಹೊರಗಡೆ ನಡೆಸಲು ಸೂಚಿಸಲಾಗಿದೆ. ಪಾಸಿಟಿವಿಟಿ ದರ ಶೇಕಡಾ 5ಕ್ಕಿಂತ ಕಡಿಮೆ ಇರುವ ಗ್ರಾಮ ಪಂಚಾಯಿತಿ, ಪಟ್ಟಣ ಪ್ರದೇಶಗಳಲ್ಲಿ ರೋಗ ಲಕ್ಷಣ ರಹಿತ ಪ್ರಕರಣಗಳನ್ನು ಪೂಲಿಂಗ್ ಮೂಲಕ ಪರೀಕ್ಷೆಗೊಳಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com