ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಆಗಸ್ಟ್ 28 ರಿಂದ 30 ರವರೆಗೆ ಸಿಇಟಿ ಪರೀಕ್ಷೆ

ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ರಾಜ್ಯದ 530 ಕೇಂದ್ರಗಳಲ್ಲಿ ಆಗಸ್ಟ್ 28ರಿಂದ 30ರವರೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)  ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಗುರುವಾರ ತಿಳಿಸಿದ್ದಾರೆ.

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ರಾಜ್ಯದ 530 ಕೇಂದ್ರಗಳಲ್ಲಿ ಆಗಸ್ಟ್ 28ರಿಂದ 30ರವರೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)  ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಗುರುವಾರ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ರಾಜ್ಯಾದ್ಯಂತ ಒಟ್ಟು 2,01,816 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಸಿದ್ದು, ಕೋವಿಡ್  ಮುನ್ನೆಚ್ಚರಿಕೆಗಳೊಂದಿಗೆ ಪರೀಕ್ಷೆ ನಡೆಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದರು. 

ಆ. 28ರಂದು ಜೀವವಿಜ್ಞಾನ ಮತ್ತು ಗಣಿತ, ಆ. 29ರಂದು ಭೌತವಿಜ್ಞಾನ ಮತ್ತು ರಸಾಯನ ವಿಜ್ಞಾನ ವಿಷಯಗಳ ಪರೀಕ್ಷೆ ನಡೆಯಲಿದೆ. ಹೊರನಾಡು ಹಾಗೂ ಗಡಿಭಾಗದ ವಿದ್ಯಾರ್ಥಿಗಳಿಗೆ ರಾಜ್ಯದ ಆರು ಸ್ಥಳಗಳಲ್ಲಿ ಆ.30ರಂದು ಕನ್ನಡ ಪರೀಕ್ಷೆ ನಡೆಯಲಿದೆ ಎಂದರು.  

ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿದ್ದು, 1,682 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಸಚಿವರು ತಿಳಿಸಿದರು.

Related Stories

No stories found.

Advertisement

X
Kannada Prabha
www.kannadaprabha.com