ಬೆಂಗಳೂರ: ಪ್ರೀತಿಗೆ ಒಲ್ಲೆ ಅಂದ ಯುವತಿಗೆ ಪಾಗಲ್ ಪ್ರೇಮಿಯೊಬ್ಬ ನಡುರಸ್ತೆಯಲ್ಲೇ ಚೂರಿಯಿಂದ ಇರಿದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ.
ಬಾಗಲಗುಂಟೆಯ ಮಂಜುನಾಥ ನಗರದಲ್ಲಿ ಈ ಘಟನೆ ನಡೆದಿದೆ. ಯುವತಿ ಕಾಲೇಜಿಗೆ ಹೋಗುತ್ತಿದ್ದಾಗ ಅಡ್ಡಗಟ್ಟಿದ ಪಾಗಲ್ ಪ್ರೇಮಿ ಉದಯ್ ಕುಮಾರ್ ಚೂರಿಯಿಂದ ಕುತ್ತಿಗೆ ಹಾಗೂ ತೊಡೆ ಭಾಗಕ್ಕೆ ಇರಿದಿದ್ದಾನೆ.
ಯುವತಿ ನೋವಿನಿಂದ ಕುಸಿದುಬಿದ್ದ ನಂತರ ಉದಯ್ ಕುಮಾರ್ ಗೋಡೆಗೆ ತಲೆ ಚಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಹಲ್ಲೆ ಸಂಬಂಧ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದಾರೆ.
ಉದಯ್ ಕುಮಾರ್ ಮತ್ತು ಸಂತ್ರಸ್ತೆ ಒಂದೇ ಕಾಲೇಜಿನಲ್ಲಿ ಪಿಯು ಒಟ್ಟಿಗೆ ಓದಿದ್ದರು. ಆದರೆ ಪದವಿಗಾಗಿ ಬೇರೆ ಕಾಲೇಜುಗಳಿಗೆ ಸೇರಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅವರ ನಡುವೆ ಭಿನ್ನಾಭಿಪ್ರಾಯಗಳಿದ್ದವು. ಹೀಗಾಗಿ ಆತ ಯುವತಿ ಉದಯ್ ಕುಮಾರ್ ಪ್ರೀತಿಯನ್ನು ನಿರಾಕರಿಸಿದ್ದಳು ಎನ್ನಲಾಗಿದೆ.
ಕುಮಾರ್ ತನ್ನ ಗೆಳತಿಯ ಮೇಲೆ ಹಲ್ಲೆ ಮಾಡುವ ಉದ್ದೇಶದಿಂದ ಆನ್ ಲೈನ್ ನಲ್ಲಿ ಬಟನ್ ಚಾಕುವನ್ನು ಆರ್ಡರ್ ಮಾಡಿದ್ದ ಎನ್ನಲಾಗಿದೆ. ಬಾಲಕಿಯ ಭುಜಕ್ಕೆ ಇರಿತದ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆ. ಘಟನೆ ವೇಳೆ ಯುವತಿಯ ಸಹೋದರನಿಗೂ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement