ಭೌತಿಕ ತರಗತಿ ಆರಂಭವಾದರೂ ಇನ್ನೂ ಕೈ ಸೇರದ ಪೂರ್ಣ ಪ್ರಮಾಣದ ಪಠ್ಯಪುಸ್ತಕ: ಸಂಕಷ್ಟದಲ್ಲಿ ವಿದ್ಯಾರ್ಥಿಗಳು

ಪಠ್ಯಪುಸ್ತಕಗಳನ್ನು ವಿತರಣೆಯಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರವನ್ನು ಇತ್ತೀಚೆಗಷ್ಟೇ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಇದರ ಬೆನ್ನಲ್ಲೇ. ಇನ್ನೂ 45.26 ರಷ್ಟು ಪಠ್ಯಪುಸ್ತಕಗಳು ವಿದ್ಯಾರ್ಥಿಗಳ ಕೈಸೇರಬೇಕಿದೆ ಎಂಬ ಮಾಹಿತಿ ಶಿಕ್ಷಣ ಇಲಾಖೆ ಅಂಕಿಅಂಶಗಳಿಂದ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಪಠ್ಯಪುಸ್ತಕಗಳನ್ನು ವಿತರಣೆಯಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರವನ್ನು ಇತ್ತೀಚೆಗಷ್ಟೇ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಇದರ ಬೆನ್ನಲ್ಲೇ. ಇನ್ನೂ 45.26 ರಷ್ಟು ಪಠ್ಯಪುಸ್ತಕಗಳು ವಿದ್ಯಾರ್ಥಿಗಳ ಕೈಸೇರಬೇಕಿದೆ ಎಂಬ ಮಾಹಿತಿ ಶಿಕ್ಷಣ ಇಲಾಖೆ ಅಂಕಿಅಂಶಗಳಿಂದ ತಿಳಿದುಬಂದಿದೆ. 

ಪಠ್ಯಪುಸ್ತಕ ವಿತರಣೆ ಮಾಡದ ರಾಜ್ಯ ಸರ್ಕಾರದ ವಿರುದ್ಧ ಮಂಗಳವಾರವಷ್ಟೇ ಹೈಕೋರ್ಟ್ ಕಿಡಿಕಾರಿತ್ತು. ತರಗತಿಗಳು ಆರಂಭವಾಗುವುದಕ್ಕಿಂತ ಮುಂಚೆ ಪಠ್ಯ ಪುಸ್ತಕಗಳ ವ್ಯವಸ್ಥೆ ಮಾಡಿಕೊಳ್ಳಬೇಕಿತ್ತು. ಈಗಾಗಲೇ ರಾಜ್ಯದಲ್ಲಿ 9 ರಿಂದ 12ನೇ ವರೆಗೆ ತರಗತಿಗಳನ್ನು ಪ್ರಾರಂಭಿಸಲಾಗಿದೆ. ಪಠ್ಯ ಪುಸ್ತಕಗಳಿಲ್ಲದೆ ವಿದ್ಯಾರ್ಥಿಗಳು ಶಾಲೆಗೆ ಹೋಗುವ ಪ್ರಕ್ರಿಯೆ ಅರ್ಥಹೀನ. ಇದರಿಂದ ಮಕ್ಕಳ ಮತ್ತು ಸರ್ಕಾರದ ಉದ್ದೇಶ ಸಾಫಲ್ಯಗೊಳ್ಳುವುದಿಲ್ಲ. ಆದ್ದರಿಂದ, ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಪಠ್ಯ ಪುಸ್ತಕಗಳನ್ನು ಪೂರೈಸುವ ವ್ಯವಸ್ಥೆಯ ಕುರಿತು ಆಗಸ್ಟ್ 30ರೊಳಗಿನ ವಸ್ತುಸ್ಥುತಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ಅದೇ ರೀತಿ ಪಿಯು ಪಠ್ಯ ಪುಸ್ತಕಗಳು ಸಕಾಲದಲ್ಲಿ ಮತ್ತು ಸುಲಭವಾಗಿ ವಿದ್ಯಾರ್ಥಿಗಳಿಗೆ ಮಾರುಕಟ್ಟೆಯಲ್ಲಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶಿಸಿತ್ತು. 

ಈ ನಡುವೆ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ಮಾಹಿತಿ ನೀಡಿ, ಪಠ್ಯಪುಸ್ತಕಗಳ ಮುದ್ರಣ ಪ್ರಕ್ರಿಯೆಯು ಸೆಪ್ಟೆಂಬರ್ ಮೊದಲ ವಾರದಲ್ಲಿ ಪೂರ್ಣಗೊಳ್ಳಲಿದೆ. 1ನೇ ತರಗತಿಯಿಂದ 10 ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ 15ರೊಳಗೆ ಪಠ್ಯಪುಸ್ತಕಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

28,96,124 ಪಠ್ಯಪುಸ್ತಕದ ಬೇಡಿಕೆಗಳ ಪೈಕಿ ಜಿಲ್ಲೆಗಳಿಗೆ ಈ ವರೆಗೂ ಶೇ.27.3 ರಷ್ಟು ಮಾತ್ರ ವಿತರಣೆ ಮಾಡಲಾಗಿದೆ. 18,10,152 ಬೇಡಿಕೆ ಪೈಕಿ ಹಾವೇರಿಗೆ ಶೇ.27.50 ಪುಸ್ಕಕಗಳು, 18,75,594 ಪೈಕಿ ಧಾರವಾಡಕ್ಕೆ ಶೇ.28.19, 11,52,210 ಬೇಡಿಕೆ ಪೈಕಿ ಗದಗಕ್ಕೆ ಶೇ.28.91, 6,04,140ಪೈಕಿ ಉತ್ತರ ಕನ್ನಡ ಜಿಲ್ಲೆಗೆ ಶೇ.30.32ರಷ್ಟು ಪಠ್ಯಪುಸ್ತಕಗಳನ್ನು ವಿತರಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ. 

ಅತೀ ಹೆಚ್ಚು ಪಠ್ಯಪುಸ್ತಕಗಳನ್ನು ವಿತರಣೆ ಮಾಡಿರುವ ಜಿಲ್ಲೆಗಳು ಇಂತಿವೆ...
ಚಿತ್ರದುರ್ಗ (ಶೇ. 88.91), ತುಮಕೂರು (ಶೇ. 88.15), ಚಿಕ್ಕಬಳ್ಳಾಪುರ (ಶೇ. 88), ಬೆಂಗಳೂರು ದಕ್ಷಿಣ (ಶೇ. 87.69), ಬೆಂಗಳೂರು ಗ್ರಾಮಾಂತರ (ಶೇ. 87.31), ಕೋಲಾರ (86.94) ಸೆಂಟ್) ಮತ್ತು ದಾವಣಗೆರೆ (ಶೇ. 86.11).

ಪಠ್ಯಪುಸ್ತಕ ವಿತರಣೆ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಇಲಾಖೆ ಪ್ರಯತ್ನಿಸುತ್ತಿದೆ. ಈ ನಡುವೆ 1-8ನೇ ತರಗತಿ ಆರಂಭ ಮಾಡುವ ಕುರಿತು ಆಗಸ್ಟ್ 30 ರಂದು ಸಭೆ ಕರೆಯಲಾಗಿದೆ. ಪ್ರಸ್ತುತ ಶೇ.72ರಷ್ಟು ಪಠ್ಯಪುಸ್ತಕಗಳು ಮುದ್ರಣಗೊಂಡಿದ್ದು, ಇನ್ನು ಕೆಲವೇ ವಾರಗಳಲ್ಲಿ ವಿತರಣೆ ಪ್ರಕ್ರಿಯೆಗಳೂ ಆರಂಭಗೊಳ್ಳಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಶೇ.54.74ರಷ್ಟು ಪಠ್ಯಪುಸ್ತಕಗಳು ಈಗಾಗಲೇ ಜಿಲ್ಲೆಗಳ ತಲುಪಿವೆ. ಇನ್ನುಳಿದ ಪುಸ್ತಕಗಳು ಮುದ್ರಣಗೊಳ್ಳುತ್ತಿವೆ. ಪಠ್ಯಪುಸ್ತಕಗಳನ್ನು ತುಂಬಿರುವ ವಾಹನಗಳನ್ನು ಜಿಲ್ಲೆಗಳಿಗೆ ಕಳುಹಿಸುವ ಮೊದಲು ಪ್ರತೀ ಪಠ್ಯಪುಸ್ತಕವನ್ನು ಪರಿಶೀಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com