ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್: ರಾಜ್ಯ ಮಹಿಳಾ ಆಯೋಗದಿಂದ ಕೇಸು ದಾಖಲು, ಕಠಿಣ ಶಿಕ್ಷೆಗೆ ಆಗ್ರಹ

ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಕಳೆದ ಮಂಗಳವಾರ ಸಾಯಂಕಾಲ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಒತ್ತಾಯಿಸಿದ್ದಾರೆ.
ಪೊಲೀಸರು ನಿನ್ನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದ ಸಾಂದರ್ಭಿಕ ಚಿತ್ರ
ಪೊಲೀಸರು ನಿನ್ನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದ ಸಾಂದರ್ಭಿಕ ಚಿತ್ರ

ಬೆಂಗಳೂರು: ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಕಳೆದ ಮಂಗಳವಾರ ಸಾಯಂಕಾಲ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಒತ್ತಾಯಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಪ್ರಕರಣ ಮಾಧ್ಯಮಗಳ ಮೂಲಕ ಗಮನಕ್ಕೆ ಬಂದ ಕೂಡಲೇ ಸ್ವಯಂ ಪ್ರೇರಿತ ಕೇಸು ದಾಖಲಿಸಿ ಪೊಲೀಸ್ ಇಲಾಖೆಗೆ ಮತ್ತು ರಾಜ್ಯ ಸರ್ಕಾರಕ್ಕೆ ಕಳುಹಿಸಿದ್ದೇವೆ. ನಾನು ಈಗ ಘಟನೆ ನಡೆದ ಸ್ಥಳಕ್ಕೆ ಹೋಗುತ್ತಿದ್ದು ಅಲ್ಲಿ ಪರಿಶೀಲನೆ ನಡೆಸಿ ತನಿಖೆಗೆ ಒತ್ತಾಯಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒತ್ತಾಯಿಸುತ್ತೇನೆ, ಮುಖ್ಯಮಂತ್ರಿಗಳನ್ನು ಮತ್ತು ಗೃಹ ಸಚಿವರನ್ನು ಭೇಟಿ ಮಾಡಿ ವರದಿ ಸಲ್ಲಿಸುತ್ತೇನೆ ಎಂದರು.

ಇನ್ನು ಕೆಲವೇ ದಿನಗಳಲ್ಲಿ ಅತ್ಯಾಚಾರಕ್ಕೀಡಾದ ಯುವತಿಯನ್ನು ಕರೆದು ಆಕೆಗೆ ಮಾನಸಿಕ ಸ್ಥೈರ್ಯ ತುಂಬಿ ಅಗತ್ಯ ಬಿದ್ದರೆ ಆಯೋಗದಿಂದ ಕೌನ್ಸಿಲಿಂಗ್ ನೀಡುವ ವ್ಯವಸ್ಥೆಯನ್ನು ಕೂಡ ಮಾಡಲಾಗುವುದು ಎಂದರು. 

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ: ಘಟನೆ ಬೆಳಕಿಗೆ ಬಂದ ಕೂಡಲೇ ಮುಖ್ಯಮಂತ್ರಿ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಹಲವರು ಪೊಲೀಸರ ಮೇಲೆ ತೀವ್ರ ಒತ್ತಡ ಆದೇಶ ಹೊರಡಿಸಿ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡು ತಪ್ಪಿತಸ್ಥರನ್ನು ಬಂಧಿಸುವಂತೆ ಸೂಚಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಳಿಸಿರುವ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಇಂದು ಬೆಳಗ್ಗೆ ಸ್ಥಳಕ್ಕೆ ಮೈಸೂರು ಪೊಲೀಸ್ ಆಯುಕ್ತ ಡಾ ಚಂದ್ರಗುಪ್ತ, ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ನೀಡಿ ತನಿಖೆ ಮಾಡುತ್ತಿದ್ದಾರೆ. ಸದ್ಯ ಸ್ಥಳಕ್ಕೆ ಯಾರಿಗೂ ಪ್ರವೇಶ ಕಲ್ಪಿಸುತ್ತಿಲ್ಲ. ಬ್ಯಾರಿಕೇಡ್ ಹಾಕಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com