ನನ್ನ ಪ್ರಕಾರ ಒಬ್ಬ ವ್ಯಕ್ತಿಗೆ ತಿಂಗಳಿಗೆ 5 ಕೆಜಿ ಅಕ್ಕಿ ಸಾಕು: ಆಹಾರ ಖಾತೆ ಸಚಿವ ಉಮೇಶ್ ಕತ್ತಿ
ಚಾಮರಾಜನಗರ: ನನ್ನ ಪ್ರಕಾರ ಒಬ್ಬ ವ್ಯಕ್ತಿಗೆ ತಿಂಗಳಿಗೆ 5 ಕೆಜಿ ಅಕ್ಕಿ ಸಾಕು ಎಂದು ಹೇಳುವ ಮೂಲಕ ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಮತ್ತೊಮ್ಮೆ ಟೀಕೆಗೆ ಗುರಿಯಾಗಿದ್ದಾರೆ.
ಆಹಾರ ಇಲಾಖೆಯಲ್ಲಿ 4 ಕೋಟಿ 1 ಲಕ್ಷ ಫಲಾನುಭವಿಗಳಿದ್ದು, ಹೆಚ್ಚುವರಿ ಆಹಾರ ಧಾನ್ಯದಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುತ್ತದೆ. ನನ್ನ ಪ್ರಕಾರ ಒಬ್ಬ ವ್ಯಕ್ತಿಗೆ 1 ತಿಂಗಳಿಗೆ 5 ಕೆಜಿ ಅಕ್ಕಿ ಸಾಲುತ್ತದೆ ಎಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ನಿನ್ನೆ ಹೇಳಿದ್ದಾರೆ.
ಸರ್ಕಾರದಿಂದ ಆಹಾರ ಭದ್ರತೆ ಯೋಜನೆಯಲ್ಲಿ ಬಡವರಿಗೆ 5 ಕೆಜಿ ಅಕ್ಕಿ ಕೊಡುತ್ತೇವೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಾಗ 10 ಕೆಜಿ ಅಕ್ಕಿ ಸರ್ಕಾರ ಕೊಡಬೇಕು, ನಮ್ಮ ಸರ್ಕಾರ ಇರುತ್ತಿದ್ದರೆ ಕೊಡುತ್ತಿದ್ದೆವು ಎನ್ನುತ್ತಾರೆ. ನನ್ನ ಪ್ರಕಾರ ಒಬ್ಬ ವ್ಯಕ್ತಿಗೆ 1 ತಿಂಗಳಿಗೆ 5 ಕೆಜಿ ಅಕ್ಕಿ ಸಾಕು. ಹೆಚ್ಚುವರಿ ಆಹಾರ ಧಾನ್ಯ ನೀಡುವುದರಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುತ್ತದೆ ಎಂದು ಹೇಳಿದರು.
ಸಚಿವ ಉಮೇಶ್ ಕತ್ತಿ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ರೈತ ಸಂಘದ ಕಾರ್ಯಕರ್ತರು ತೆರಕಣಾಂಬಿಯಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ