ಆಗಸ್ಟ್ 29, 30ರಂದು ಕೃಷ್ಣ ಜನ್ಮಾಷ್ಟಮಿ: ಇಸ್ಕಾನ್ ಭೇಟಿಗೆ ಜನರಿಗೆ ಅನುಮತಿ ಇಲ್ಲ, ಆನ್ ಲೈನ್ ನಲ್ಲಿ ವೀಕ್ಷಣೆಗೆ ಅವಕಾಶ

ಬೆಂಗಳೂರಿನ ಇಸ್ಕಾನ್ ದೇಗುಲದಲ್ಲಿ ಇದೇ ಆಗಸ್ಟ್ 29 ಮತ್ತು 30ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕೊರೊನಾ ಸಾಂಕ್ರಾಮಿಕ ಹಿನ್ನಲೆಯಲ್ಲಿ ಈ ಬಾರಿಯೂ ಇಸ್ಕಾನ್ ಭೇಟಿಗೆ ಜನರಿಗೆ ಅವಕಾಶ ನಿರಾಕರಿಸಲಾಗಿದೆ.
ಇಸ್ಕಾನ್ ದೇಗುಲ
ಇಸ್ಕಾನ್ ದೇಗುಲ

ಬೆಂಗಳೂರು: ಬೆಂಗಳೂರಿನ ಇಸ್ಕಾನ್ ದೇಗುಲದಲ್ಲಿ ಇದೇ ಆಗಸ್ಟ್ 29 ಮತ್ತು 30ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕೊರೊನಾ ಸಾಂಕ್ರಾಮಿಕ ಹಿನ್ನಲೆಯಲ್ಲಿ ಈ ಬಾರಿಯೂ ಇಸ್ಕಾನ್ ಭೇಟಿಗೆ ಜನರಿಗೆ ಅವಕಾಶ ನಿರಾಕರಿಸಲಾಗಿದೆ.

ಈ ಬಗ್ಗೆ ಇಸ್ಕಾನ್ ದೇಗುಲದ ಆಡಳಿತ ಮಂಡಳಿ ಮಾಹಿತಿ ನೀಡಿದ್ದು, ದೇಗುಲಕ್ಕೆ ಭೇಟಿ ನೀಡುವ ಜನರ ಅನುಪಸ್ಥಿತಿಯಲ್ಲಿ ಹಾಲಿ ವರ್ಷದ ಜನ್ಮಾಷ್ಟಮಿ ಆಚರಣೆಗಳು ನಡೆಯಲಿವೆ ಎಂದು ಸ್ಪಷ್ಟಪಡಿಸಿದೆ. ಅಲ್ಲದೆ ಜನ್ಮಾಷ್ಟಮಿ ಆಚರಣೆಗಳನ್ನು ಭಕ್ತರು ಆನ್ ಲೈನ್ ನಲ್ಲಿ ಕಣ್ತುಂಬಿಕೊಳ್ಳಬಹುದು ಎಂದು ಬೆಂಗಳೂರು ಇಸ್ಕಾನ್ ದೇಗುಲದ ಸ್ಟ್ರಾಟೆಜಿಕ್ ಕಮ್ಯುನಿಕೇಷನ್ ವಿಭಾಗದ ಮುಖ್ಯಸ್ಥ ನವೀನ್ ನೀರದ ದಾಸ ತಿಳಿಸಿದ್ದಾರೆ.

ಅಲ್ಲದೆ ಇದೇ ವಿಚಾರವಾಗಿ ಇಸ್ಕಾನ್ ಅಧಿಕೃತ ಟ್ವಿಟರ್ ಖಾತೆಯಲ್ಲೂ ಮಾಹಿತಿ ನೀಡಲಾಗಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com