

ಕಾರವಾರ: 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ 27 ವರ್ಷದ ವ್ಯಕ್ತಿಯನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ಬಂಧಿಸಲಾಗಿದೆ.
ಆರೋಪಿಯೊಂದಿಗೆ ಬಾಲಕಿ ಮನೆಗೆ ವಾಪಸ್ ಬರುವ ವೇಳೆ ಆಕೆಯನ್ನು ಏಕಾಂತ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಮನೆಗೆ ಹಿಂದಿರುಗಿದ ಬಾಲಕಿ ತನ್ನ ಪೋಷಕರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ಆಕೆಯ ತಂದೆ ಸಿದ್ದಾಪುರ ಪೊಲೀಸರಿಗೆ ದೂರು ನೀಡಿದ್ದಾರೆ.
27 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಉತ್ತರ ಕನ್ನಡ ಎಸ್ಪಿ ಶಿವಪ್ರಕಾಶ್ ದೇವರಾಜ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ. ಬಾಲಕಿಯನ್ನು ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಆತನನ್ನು ಶುಕ್ರವಾರ ಕಾರವಾರದ ನ್ಯಾಯಾಲಯಕ್ಕೆಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.