ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ಆರು ಯುವಕರಿಂದ ನನ್ನ ಮೇಲೆ ಹಲ್ಲೆ; ಸಂತ್ರಸ್ಥೆ ಸ್ನೇಹಿತನ ಹೇಳಿಕೆ

ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥೆ ಸ್ನೇಹಿತ ಘಟನೆಯ ಕುರಿತು ವಿವರವಾದ ಮಾಹಿತಿಯನ್ನು ತನಿಖಾಧಿಕಾರಿಗಳಿಗೆ ನೀಡಿರುವುದು ಉನ್ನತ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಪೊಲೀಸರಿಂದ ಸ್ಥಳ ಪರಿಶೀಲನೆ ಚಿತ್ರ
ಪೊಲೀಸರಿಂದ ಸ್ಥಳ ಪರಿಶೀಲನೆ ಚಿತ್ರ

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥೆ ಸ್ನೇಹಿತ ಘಟನೆಯ ಕುರಿತು ವಿವರವಾದ ಮಾಹಿತಿಯನ್ನು ತನಿಖಾಧಿಕಾರಿಗಳಿಗೆ ನೀಡಿರುವುದು ಉನ್ನತ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಆ.24ರ ಸಂಜೆ 7.25 ರಿಂದ 7.30ರ ಸುಮಾರಿಗೆ ಜೆಎಸ್‌ಎಸ್ ಆಯುರ್ವೇದಿಕ್ ಕಾಲೇಜಿನ ಎದುರು ವಾಟರ್ ಟ್ಯಾಂಕ್ ಬಳಿ ಕಚ್ಚಾ ರಸ್ತೆಯಲ್ಲಿ ನಾವಿಬ್ಬರೂ ಹೋಗಿದ್ದೆವು. ನಾನು ಯಾವಾಗಲೂ ಜಾಗಿಂಗ್‌ಗೆ ಹೋಗುವ ಸ್ಥಳ ಅದಾಗಿತ್ತು. ಆ ಸ್ಥಳದಲ್ಲಿ ದ್ವಿಚಕ್ರ ವಾಹನ ನಿಲ್ಲಿಸಿದಾಗ 25 ರಿಂದ‌ 30 ವರ್ಷದ ಸುಮಾರು 6 ಜನ ಬಂದರು. ನಂತರ ಬಲ ಭಾಗದಿಂದ ಏಕಾಏಕೀ ಬಂದು ದೊಣ್ಣೆಯಿಂದ ನನ್ನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದರು. ನಂತರ ನನ್ನನ್ನು ಪಕ್ಕಕ್ಕೆ ತಳ್ಳಿ ಜೊತೆಗಿದ್ದ ಗೆಳತಿಯನ್ನು ಪೊದೆಗಳಿರುವ ಜಾಗಕ್ಕೆ ಎಳೆದುಕೊಂಡು ಹೋದರು. ಅದರಲ್ಲಿ ತೆಳ್ಳಗಿರುವ ಒಬ್ಬ ನನ್ನ ಹಣೆಗೆ ಕಲ್ಲಿನಿಂದ ಹೊಡೆದ. ಪರಿಣಾಮ ನಾನು ಪ್ರಜ್ಞೆ ತಪ್ಪಿದ್ದಾಗಿ ಸಂತ್ರಸ್ಥೆಯ ಸ್ನೇಹಿತ ಪೊಲೀಸರಿಗೆ ತಿಳಿಸಿದ್ದಾನೆ. 

ಬಳಿಕ 15 ನಿಮಿಷದ ನಂತರ ಪ್ರಜ್ಞೆ ಬಂದಾಗ 4 ಜನ ನನ್ನ ತಂದೆಗೆ ಕರೆ ಮಾಡಿಸಿ, 3 ಲಕ್ಷ ರೂ. ಹಣ ಕೊಡುವಂತೆ ಒತ್ತಾಯ ಮಾಡಿದರು. ಗೆಳತಿ ಎಲ್ಲಿ ಎಂದು ಕೇಳಿದಾಗ ಇಬ್ಬರೂ ಆಕೆಯನ್ನು ಎಳೆದುಕೊಂಡು ಬಂದು ನನ್ನ ಪಕ್ಕ ಕೂರಿಸಿದರು. ಅವಳು ತೀವ್ರವಾಗಿ ಗಾಯಗೊಂಡು ನಿತ್ರಾಣಗೊಂಡಿದ್ದಳು. ಅವಳ ದೇಹದ ಮೇಲೆ ತಿರುಚಿದ ಗಾಯಗಳಾಗಿದ್ದವು ಎಂದು ಪೊಲೀಸರಿಗೆ ಆತ ಹೇಳಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ.

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ರಾಜ್ಯ ಪೊಲೀಸ್ ಮಹಾನಿರ್ದೇಶಕರ (ಡಿಜಿಪಿ) ಮೇಲುಸ್ತುವಾರಿಯಲ್ಲಿ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಚಾಮುಂಡಿಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಗುಡ್ಡದಲ್ಲಿ ಮಂಗಳವಾರ ರಾತ್ರಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com