ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಘಟಪ್ರಭಾ ಪೊಲೀಸರಿಂದ ನಾಲ್ವರು ಆರೋಪಿಗಳನ್ನು ಬಂಧನ

ಮೈಸೂರಿನಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಬೆಳಗಾವಿಯಲ್ಲಿ ಘಟಪ್ರಭಾ ಪೊಲೀಸರು ನಾಲ್ವರು ಕಾಮುಕರನ್ನು ಬಂಧಿಸಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬೆಳಗಾವಿ: ಮೈಸೂರಿನಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಬೆಳಗಾವಿಯಲ್ಲಿ ಘಟಪ್ರಭಾ ಪೊಲೀಸರು ನಾಲ್ವರು ಕಾಮುಕರನ್ನು ಬಂಧಿಸಿದ್ದಾರೆ. 

ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ತನಿಖೆ ಇನ್ನು ಪ್ರಗತಿಯಲ್ಲಿರುವಾಗಲೇ ಬೆಳಗಾವಿಯಲ್ಲಿಯೂ ಇಂತಹ ಮತ್ತೊಂದು ಹೇಯ ಕೃತ್ಯ ನಡೆದಿರುವುದು ವರದಿಯಾಗಿದೆ.

ಜಿಲ್ಲೆಯ ಗ್ರಾಮವೊಂದರಲ್ಲಿ ಜಮೀನಿಗೆ ಹೋಗಿದ್ದ 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಾಲ್ವರು ಯುವಕರು ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ ಎಂದು ಆರೋಪಿಸಿ ಗೋಕಾಕ್​ ತಾಲೂಕಿನ  ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಬಾಲಕಿಯ ಪೋಷಕರು ದೂರು ದಾಖಲಿಸಿದ್ದಾರೆ.

ಈ ದುರ್ಘಟನೆ 20 ದಿನಗಳ ಹಿಂದೆಯೇ ನಡೆದಿದೆ ಎಂದು ಪೋಷಕರು ಗುರುವಾರ ಸಂಜೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ದೂರಿನನ್ವಯ ಪೊಲೀಸರನ್ನು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಬೆಳಗಾವಿ ಎಸ್ ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ.

ಕಾಮುಕರ ಅಟ್ಟಹಾಸಕ್ಕೆ ಅಪ್ರಾಪ್ತೆ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com