ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಕೇರಳ, ತಮಿಳುನಾಡು ರಾಜ್ಯಗಳ 4 ಇಂಜಿನಿಯರಿಂಗ್ ವಿದ್ಯಾರ್ಥಿಗಳ ಮೇಲೆ ಪೊಲೀಸರ ಶಂಕೆ

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತಂಡಕ್ಕೆ ಮಹತ್ವದ ಸುಳಿವುಗಳು ಲಭ್ಯವಾಗಿವೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮೈಸೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತಂಡಕ್ಕೆ ಮಹತ್ವದ ಸುಳಿವುಗಳು ಲಭ್ಯವಾಗಿವೆ. 

ಪ್ರಕರಣ ಸಂಬಂಧ ಶೋಧಕಾರ್ಯ ಮುಂದುವರೆಸಿರುವ ಪೊಲೀಸರಿಗೆ, ತಮಿಳುನಾಡು ಹಾಗೂ ಕೇರಳ ರಾಜ್ಯಗಳ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಮೇಲೆ ಶಂಕೆ ವ್ಯಕ್ತವಾಗಿದೆ. 

ಆಗಸ್ಟ್ 24ರಂದು ರಾತ್ರಿ 7 ಗಂಟೆ ಸುಮಾರಿಗೆ ಗ್ಯಾಂಗ್‌ರೇಪ್ ಪ್ರಕರಣ ನಡೆದಿದ್ದು, ಅಂದು ಆರೋಪಿಗಳು ಮೈಸೂರಿನಲ್ಲೇ ವಾಸ್ತವ್ಯ ಹೂಡಿದ್ದರು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದು, ಈ ನಾಲ್ವರು ಆರೋಪಿಗಳು ಇದೀಗ ಕೇರಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿದ್ದಾರೆಂದು ಹೇಳಲಾಗುತ್ತಿದೆ. ಈ ನಾಲ್ವರ ಮೊಬೈಲ್ ನೆಟ್ವರ್ಕ್ ಗಳು ಅಪರಾಧ ನಡೆದ ಸಮಯದಲ್ಲಿ ಅವರು ಸ್ಥಳದಲ್ಲಿದ್ದರು ಎಂಬುದನ್ನು ತಿಳಿಸಿವೆ. ಇದೇ ಸಂದರ್ಭದಲ್ಲಿ ಪೊಲೀಸರು ನಾಲ್ವರ ಕಾಲೇಜಿನಲ್ಲಿಯೂ ಪರಿಶೀಲನೆ ನಡೆಸಿದ್ದು, ಘಟನೆ ನಡೆದ ದಿನ ನಾಲ್ವರೂ ಪರೀಕ್ಷೆಗೆ ಗೈರು ಹಾಜರಾಗಿರುವುದು ತಿಳಿದುಬಂದಿದೆ. 

ಈ ನಡುವೆ ರಾಷ್ಟ್ರರಾಜಧಾನಿ ದೆಹಲಿಗೆ ತೆರಳಿದ್ದ ಡಿಜಿ, ಐಜಿಪಿ ಪ್ರವೀಣ್ ಸೂದ್ ಅವರು ಘಟನೆ ಬಳಿಕ ಮೈಸೂರು ನಗರಕ್ಕೆ ಆಗಮಿಸಿದ್ದಾರೆ. 

ಸಂತ್ರಸ್ತೆ ಮರಳಿ ಸಾಮಾನ್ಯ ಸ್ಥಿತಿಗೆ ಬರಲು ಕಾಲಾವಕಾಶ ನೀಡಬೇಕಿದೆ. ಆಕೆಯ ತನಿಖೆಗೆ ಆಕೆಯ ಸಂಪೂರ್ಣ ಸಹಕಾರ ಬೇಕಿದೆ. ಆಕೆ ಆತಂಕದಿಂದ ಹೊರಬಂದ ಬಳಿಕ ತನಿಖೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com