ಬೆಂಗಳೂರು: ಬಾರ್​ಗೆ ನುಗ್ಗಿ ರೌಡಿಗಳ ದಾಂಧಲೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

ನಗರದಲ್ಲಿ ಪುಡಿ ರೌಡಿಗಳ ಹಾವಳಿ ಹೆಚ್ಚಾಗಿದ್ದು, ಮಾರಕಾಸ್ತ್ರಗಳನ್ನು ಹಿಡಿದು ಬಾರ್ ವೊಂದಕ್ಕೆ ​ನುಗ್ಗಿದ್ದ ರೌಡಿಗಳು ಗಲಾಟೆ ಮಾಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ನಗರದಲ್ಲಿ ಪುಡಿ ರೌಡಿಗಳ ಹಾವಳಿ ಹೆಚ್ಚಾಗಿದ್ದು, ಮಾರಕಾಸ್ತ್ರಗಳನ್ನು ಹಿಡಿದು ಬಾರ್ ವೊಂದಕ್ಕೆ ​ನುಗ್ಗಿದ್ದ ರೌಡಿಗಳು ಗಲಾಟೆ ಮಾಡಿದ್ದಾರೆ.

ಭಾನುವಾರ ಸಂಜೆ ಸುಮಾರು 7.30ರ ಸುಮಾರಿಗೆ ಪ್ರಕರಣ ನಡೆದಿದ್ದು, ಘಟನೆಯ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸುಬ್ರಹ್ಮಣ್ಯಪುರ ಪೊಲೀಸ್​​ ಠಾಣಾ ವ್ಯಾಪ್ತಿಯ ಇಟ್ಟಮಡು ಬಳಿ ​ಎಸ್​​ಎಲ್​ವಿ ಬಾರ್​​ಗೆ ನುಗ್ಗಿದ್ದ ರೌಡಿಗಳನ್ನು ಗ್ಲಾಸ್​ಗಳನ್ನ ಒಡೆದು ಹಾಕಿದ್ದಾರೆ. ಅಲ್ಲದೇ, ಪಕ್ಕದ ಬಾರ್​ಗೂ ನುಗ್ಗಿ ಗ್ಲಾಸ್​ಗಳನ್ನು ಒಡೆದು ಹಾಕಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. 

ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com