ಆಗಸ್ಟ್ ತಿಂಗಳಲ್ಲಿ ದಾಖಲೆಯ 1.17 ಕೋಟಿ ಡೋಸ್ ಕೊರೋನಾ ಲಸಿಕೆ ವಿತರಣೆ: ಡಾ. ಕೆ.ಸುಧಾಕರ್

ಆಗಸ್ಟ್ ತಿಂಗಳಿನಲ್ಲಿ ರಾಜ್ಯದಲ್ಲಿ ದಾಖಲೆಯ 1.17 ಕೋಟಿ ಡೋಸ್ ಕೋವಿಡ್-19 ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಡಾ. ಕೆ. ಸುಧಾಕರ್
ಡಾ. ಕೆ. ಸುಧಾಕರ್
Updated on: 

ಬೆಂಗಳೂರು: ಆಗಸ್ಟ್ ತಿಂಗಳಿನಲ್ಲಿ ರಾಜ್ಯದಲ್ಲಿ ದಾಖಲೆಯ 1.17 ಕೋಟಿ ಡೋಸ್ ಕೋವಿಡ್-19 ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ಜನವರಿ 2021ರಿಂದ ಲಸಿಕೆ ಅಭಿಯಾನ ಆರಂಭವಾದ ಈ ತಿಂಗಳಲ್ಲಿಯೇ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆಯನ್ನು ಹಾಕಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಡಿಸೆಂಬರ್ 2021ರೊಳಗೆ ಲಸಿಕಾ ಅಭಿಯಾನದಲ್ಲಿ ಶೇ. 100 ರಷ್ಟು ಪ್ರಗತಿ ಸಾಧಿಸುವ ಹಾದಿಯಲ್ಲಿರುವುದಾಗಿ ಸುಧಾಕರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com