ಬೆಂಗಳೂರಿನಲ್ಲಿ ಎರಡು ಓಮಿಕ್ರಾನ್ ಕೇಸ್ ಪತ್ತೆ ಹಿನ್ನೆಲೆ, ನಾಳೆ ಮಹತ್ವದ ಸಭೆ: ಮುಖ್ಯಮಂತ್ರಿ ಬೊಮ್ಮಾಯಿ

ದೇಶದಲ್ಲಿಯೇ ಮೊದಲಿಗೆ ಬೆಂಗಳೂರಿನಲ್ಲಿ ಕೋವಿಡ್-19 ರೂಪಾಂತರಿ 'ಓಮಿಕ್ರಾನ್' ತಳಿಯ ಕೇಸ್ ಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ನಾಳೆ ಮಹತ್ವದ ಸಭೆ ನಡೆಸಿ, ಹೊಸ ಮಾರ್ಗಸೂಚಿ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ನವದೆಹಲಿ/ಬೆಂಗಳೂರು: ದೇಶದಲ್ಲಿಯೇ ಮೊದಲಿಗೆ ಬೆಂಗಳೂರಿನಲ್ಲಿ ಕೋವಿಡ್-19 ರೂಪಾಂತರಿ 'ಓಮಿಕ್ರಾನ್' ತಳಿಯ ಕೇಸ್ ಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ನಾಳೆ ಮಹತ್ವದ ಸಭೆ ನಡೆಸಿ, ಹೊಸ ಮಾರ್ಗಸೂಚಿ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನವದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಓಮಿಕ್ರಾನ್ ಸೋಂಕಿನ ಬಗ್ಗೆ ತಜ್ಞರ ಅಭಿಪ್ರಾಯ ಹಾಗೂ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಪಡೆಯಲು ಪ್ರಯತ್ನಿಸುತ್ತಿರುವುದಾಗಿ ಹೇಳಿದರು. 

ನಾವು ಸಾಕಷ್ಟು ಮುಂಜಾಗ್ರತೆ ವಹಿಸಿದ್ದೇವೆ. ಈ ಸಂಬಂಧ ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಓಮಿಕ್ರಾನ್ ಕೇಸಿನ ಬಗ್ಗೆ ಹೆಚ್ಚಿನ ವಿವರ ಸಲ್ಲಿಸುವಂತೆ ಅವರು ಹೇಳಿದ್ದಾರೆ. ಇಂತಹ ಕೇಸ್ ಗಳು ಹಾಗೂ ಅವರ ಸಂಪರ್ಕಿತರನ್ನು ಪತ್ತೆ ಹಚ್ಚುವುದು ಇದೀಗ ನಮ್ಮ ಕೆಲಸವಾಗಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com