
ಬೆಂಗಳೂರು: ರಾಜ್ಯದಲ್ಲಿ ಮಾರಕ ಕೋವಿಡ್ ಸಾಂಕ್ರಾಮಿಕ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 413 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಪತ್ತೆಯಾಗಿರುವ ಹೊಸ ಸೋಂಕು ಪ್ರಕರಣಗಳ ಮೂಲಕ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 29,97,246ಕ್ಕೆ ಏರಿಕೆಯಾಗಿದೆ. ಅಂತೆಯೇ ಇಂದು ಕೋರೋನಾದಿಂದಾಗಿ 4 ಸೋಂಕಿತರು ಸಾವನ್ನಪ್ಪಿದ್ದು, ಕೋವಿಡ್ ಗೆ ಬಲಿಯಾದವರ ಸಂಖ್ಯೆ 38,220 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 256 ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಸಂಖ್ಯೆ 29,52,101ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 6,896ಕ್ಕೆ ಕುಸಿದಿದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು 212 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಎರಡು ಸಾವು ವರದಿಯಾಗಿದೆ. ಬೆಂಗಳೂರಿನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 12,57,035ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 16,342ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಇಂದು 185 ಮಂದಿ ಸೋಂಕಿತರು ಗುಣಮುಖರಾಗಿದ್ದು, ನಗರದಲ್ಲಿ ಒಟ್ಟಾರೆ ಗುಣಮುಖರ ಪ್ರಮಾಣ 12,35,643ಕ್ಕೆ ಏರಿಕೆಯಾಗಿದೆ.
Advertisement