ಬೆಂಗಳೂರಿನಲ್ಲಿ ಮಹಿಳೆ ಸಂಶಯಾಸ್ಪದ ಸಾವು: ಕುಡಿದ ಮತ್ತಿನಲ್ಲಿ ಕೆರೆಗೆ ಬಿದ್ದಿರುವ ಶಂಕೆ

ನಗರದ ಕೆ.ಆರ್ ಪುರ ಭಟ್ಟರಹಳ್ಳಿ ಕೆರೆಯಲ್ಲಿ ಬಿದ್ದ ಅಪರಿಚಿತ ಮೃತ ಮಹಿಳೆಯ ಗುರುತು ಪತ್ತೆಯಾಗಿದ್ದು, ಕುಡಿದ ಮತ್ತಿನಲ್ಲಿ ಕೆರೆಗೆ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗುತ್ತಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ನಗರದ ಕೆ.ಆರ್ ಪುರ ಭಟ್ಟರಹಳ್ಳಿ ಕೆರೆಯಲ್ಲಿ ಬಿದ್ದ ಅಪರಿಚಿತ ಮೃತ ಮಹಿಳೆಯ ಗುರುತು ಪತ್ತೆಯಾಗಿದ್ದು, ಕುಡಿದ ಮತ್ತಿನಲ್ಲಿ ಕೆರೆಗೆ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗುತ್ತಿದೆ.

ಮೃತ ಮಹಿಳೆಯನ್ನು ಅಕ್ಕಮ್ಮ ಎಂದು ಗುರುತಿಸಲಾಗಿದ್ದು, ಗುಲ್ಬರ್ಗ ಮೂಲದವರು ಎಂದು ತಿಳಿದು ಬಂದಿದೆ. ಕಟ್ಟಡ ಕಾಮಗಾರಿ ಕೆಲಸ ಮಾಡುತ್ತಿದ್ದ ಅಕ್ಕಮ್ಮ ಅವರು ಮದ್ಯ ಸೇವನೆ ಮಾಡುತ್ತಿದ್ದರು. ಕುಡಿಯುವ ಅಭ್ಯಾಸ ಇದ್ದ ಇವರು ಪ್ರತಿದಿನ ಕುಡಿದು ರಸ್ತೆಯ ಮೇಲೆ ಮಲಗುತ್ತಿದ್ದರು ಎಂಬುದು ತನಿಖೆಯಿಂದ ಗೊತ್ತಾಗಿದೆ.

ಇದನ್ನೂ ಓದಿ: ಬೆಂಗಳೂರು: ರಸ್ತೆ ಗುಂಡಿ ಖಂಡಿಸಿ ಎಎಪಿಯಿಂದ ಹತ್ತು ದಿನಗಳ ಜನಜಾಗೃತಿ, ಸಹಿ ಸಂಗ್ರಹ ಅಭಿಯಾನ
 
ಭಟ್ಟರಹಳ್ಳಿ ಕೆರೆಗೆ ಫೆನ್ಸಿಂಗ್ ಹಾಕದೆ ಇರುವ ಕಾರಣ ಗುರುವಾರ ಕುಡಿದ ಗುಂಗಿನಲ್ಲಿ ಆಯಾ ತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿರಬಹುದೆಂಬ ಅನುಮಾನ ದಟ್ಟವಾಗಿದೆ. ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ ಕೆ.ಆರ್ ಪುರ ಪೊಲೀಸರು ಸದ್ಯ ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com