ಶಿವರಾಂ ನಿಧನಕ್ಕೆ ಸಂತಾಪ: ಅಗಲಿದ ಹಿರಿಯ ಚೇತನಕ್ಕೆ ಸಿಎಂ ಬೊಮ್ಮಾಯಿ ಸೇರಿ ಗಣ್ಯರಿಂದ ಕಂಬನಿ

ಇಂದು ನಿಧನರಾದ ಸ್ಯಾಂಡಲ್ ವುಡ್ ಹಿರಿಯ ಕಲಾವಿದ ಎಸ್ ಶಿವರಾಮ್ ಅವರಿಗೆ ಇಡೀ ಚಿತ್ರರಂಗ ಸಂತಾಪ ಸೂಚಿಸಿದ್ದು, ಹಿರಿಯ ನಟ-ನಟಿಯರು ಟ್ವೀಟ್ ಮೂಲಕ ಶಿವರಾಂ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ನಟ ಶಿವರಾಮ್ ಇನ್ನಿಲ್ಲ
ನಟ ಶಿವರಾಮ್ ಇನ್ನಿಲ್ಲ
Updated on

ಬೆಂಗಳೂರು: ಇಂದು ನಿಧನರಾದ ಸ್ಯಾಂಡಲ್ ವುಡ್ ಹಿರಿಯ ಕಲಾವಿದ ಎಸ್ ಶಿವರಾಮ್ ಅವರಿಗೆ ಇಡೀ ಚಿತ್ರರಂಗ ಸಂತಾಪ ಸೂಚಿಸಿದ್ದು, ಹಿರಿಯ ನಟ-ನಟಿಯರು ಟ್ವೀಟ್ ಮೂಲಕ ಶಿವರಾಂ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, 'ಕನ್ನಡ ಚಿತ್ರರಂಗದ ಹೆಸರಾಂತ ಹಿರಿಯ ಕಲಾವಿದ ಶಿವರಾಂ ಅವರ ನಿಧನ ತುಂಬಾ ದುಃಖದ ವಿಷಯ. ಶಿವರಾಂ ಅವರ ಅಗಲಿಕೆಯಿಂದ  ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಅಂತೆಯೇ ಸಚಿವರಾದ ಶಶಿಕಲಾ ಜೊಲ್ಲೆ ಅವರೂ ಕೂಡ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದು, 'ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕರಾದ ಶ್ರೀ ಶಿವರಾಂ ಅವರು ವಿಧಿವಶರಾಗಿರುವುದು ದುಃಖದ ಸಂಗತಿ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ. ಅವರ ಕುಟುಂಬಸ್ಥರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ಈ ನೋವನ್ನು ಸಹಿಸುವ ಶಕ್ತಿ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಅಂತೆಯೇ, 'ಮನೋಜ್ಞ ಅಭಿನಯದ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದ ಹಿರಿಯ ಪೋಷಕ ನಟ ಶಿವರಾಂ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಆಘಾತವಾಯಿತು. ಭಗವಂತನು ನಿಮ್ಮ ಆತ್ಮಕ್ಕೆ ಶಾಂತಿ ನೀಡಲಿ. ನಿಮ್ಮ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಆ ದೇವರು ಕೊಡಲಿ ಎಂದು ಸಚಿವ ಮುರುಗೇಶ್ ನಿರಾಣಿ ಟ್ವೀಟ್ ಮಾಡಿದ್ದಾರೆ.

ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಮಹಮದ್ ನಲಪಾಡ್, 'ಹಿರಿಯ ನಟ ಶ್ರೀ ಶಿವರಾಂ ಅವರು ಇನ್ನಿಲ್ಲವೆಂಬ ಸುದ್ದಿ ತಿಳಿದು ಆಘಾತವಾಯಿತು. ನಟನೆ, ಚಲನಚಿತ್ರ ನಿರ್ಮಾಣ ಹೀಗೆ ಕನ್ನಡ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದ ಶ್ರೀಯುತರ ನಿಧನವು ಕಲಾಲೋಕಕ್ಕೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಶಾಂತಿ‌ ಸಿಗಲಿ‌ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಅಂತೆಯೇ, 'ಕನ್ನಡ ಚಿತ್ರರಂಗದ ಹಿರಿಯ ನಟ ,ನಿರ್ದೇಶಕ ನಿರ್ಮಾಪಕರಾದ ಎಸ್​. ಶಿವರಾಂ ಅವರು ನಿಧನರಾದ ಸುದ್ದಿ ತಿಳಿದು ದುಃಖವಾಯಿತು. ಕನ್ನಡ ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆ ಅಪಾರ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ, ಕುಟುಂಬಕ್ಕೆ ಮತ್ತು ಅವರ ಅಭಿಮಾನಿಗಳಿಗೆ ಅಗಲಿಕೆಯ ನೋವು ಭರಿಸುವ ಶಕ್ತಿ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂಸದೆ ಮಂಗಳಾ ಅಂಗಡಿ ಟ್ವೀಟ್ ಮಾಡಿದ್ದಾರೆ.

'ಕನ್ನಡ ಚಿತ್ರರಂಗದ ಹಿರಿಯ ನಟ ಎಸ್​. ಶಿವರಾಂ ಅವರ ಅಗಲಿಕೆಯ ಸುದ್ದಿ ತಿಳಿದು ತೀವ್ರ ದುಃಖವಾಯಿತು. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ಕರುಣಿಸಲೆಂದು ಪ್ರಾರ್ಥಿಸುತ್ತೇನೆ ಎಂದು ಸಚಿವ ಆನಂದ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಇತ್ತ ಬಿಜೆಪಿ ಮುಖಂಡ ನವೀನ್ ಕುಮಾರ್ ಕಟೀಲ್ ಈ ಬಗ್ಗೆ ಟ್ವೀಟ್ ಮಾಡಿದ್ದು, 'ಕನ್ನಡ ಚಿತ್ರರಂಗದ ಖ್ಯಾತ ಪೋಷಕ ನಟರಾಗಿದ್ದ ಶಿವರಾಂ ಅವರು ಇಹಲೋಕ ತ್ಯಜಿಸಿದ್ದಾರೆ.  ಅವರ ಆತ್ಮಕ್ಕೆ ಸದ್ಗತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ, ಹಿತೈಷಿಗಳಿಗೆ ದು:ಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥನೆ ಮಾಡಿದ್ದಾರೆ.

ನಟ ಹಾಗೂ ರಾಜ್ಯ ಕೃಷಿ ಸಚಿವ ಬಿಸಿ ಪಾಟೀಲ್ ಅವರು, 'ಕನ್ನಡ ಚಿತ್ರರಂಗದ ಹಿರಿಯ ನಟ ಎಸ್​. ಶಿವರಾಂ ಅವರು ಇಹಲೋಕ ತ್ಯಜಿಸಿರುವ ಸುದ್ದಿ ತಿಳಿದು ಅತೀವ ದುಃಖವಾಯಿತು. ನಟನೆ, ನಿರ್ದೇಶನ, ನಿರ್ಮಾಪಕರಾಗಿಯೂ ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಿ, ಕುಟುಂಬ ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಭರಿಸುವ ಶಕ್ತಿ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com