ಬಿಎಂಟಿಸಿ (ಸಂಗ್ರಹ ಚಿತ್ರ)
ಬಿಎಂಟಿಸಿ (ಸಂಗ್ರಹ ಚಿತ್ರ)

ನವೆಂಬರ್ ನಲ್ಲಿ 4.26 ಲಕ್ಷ ರೂ. ದಂಡ ಸಂಗ್ರಹಿಸಿದ ಬಿಎಂಟಿಸಿ

ಬೆಂಗಳೂರು ನಗರ ಸಾರಿಗೆ ಇಲಾಖೆ ಬಿಎಂಟಿಸಿ (Bengaluru Metropolitan Transport Corporation) ಕಳೆದ ನವೆಂಬರ್ ತಿಂಗಳಿನಲ್ಲಿ ದಂಡದ ರೂಪದಲ್ಲಿ ಒಟ್ಟು 4.26 ಲಕ್ಷ ರೂ ಹಣವನ್ನು ಸಂಗ್ರಹಿಸಿದೆ.

ಬೆಂಗಳೂರು: ಬೆಂಗಳೂರು ನಗರ ಸಾರಿಗೆ ಇಲಾಖೆ ಬಿಎಂಟಿಸಿ (Bengaluru Metropolitan Transport Corporation) ಕಳೆದ ನವೆಂಬರ್ ತಿಂಗಳಿನಲ್ಲಿ ದಂಡದ ರೂಪದಲ್ಲಿ ಒಟ್ಟು 4.26 ಲಕ್ಷ ರೂ ಹಣವನ್ನು ಸಂಗ್ರಹಿಸಿದೆ.

ಈ ಬಗ್ಗೆ ಬಿಎಂಟಿಸಿ ಅಧಿಕಾರಿಗಳು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಮಾಹಿತಿ ನೀಡಿದ್ದು, ನವೆಂಬರ್ ತಿಂಗಳಿನಲ್ಲಿ ನಿಯಮ ಉಲ್ಲಂಘಿಸಿದ ಒಟ್ಟು 2794 ಪ್ರಯಾಣಿಕರಿಂದ 4,26,734 ರೂ ದಂಡ ಸಂಗ್ರಹಿಸಲಾಗಿದೆ. ಈ ಪೈಕಿ 214 ಪುರುಷ ಪ್ರಯಾಣಿಕರು ಮಹಿಳಾ ಪ್ರಯಾಣಿಕರಿಗೆ ಮೀಸಲಾಗಿಟ್ಟ ಆಸನಗಳನ್ನು ಅತಿಕ್ರಮಿಸಿ ಕುಳಿತು ಪ್ರಯಾಣ ಮಾಡುತ್ತಿದ್ದ ಆರೋಪದ ಮೇರೆಗೆ ಒಟ್ಟು 21,400 ರೂ ದಂಡ ಸಂಗ್ರಹಿಸಲಾಗಿದೆ. 

ಕರ್ತವ್ಯ ಲೋಪ ಆರೋಪದಡಿಯಲ್ಲಿ ಬಸ್ ನಿರ್ವಾಹಕರ (Bus conductors) ವಿರುದ್ಧ ಒಟ್ಟು 1642 ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.
 

Related Stories

No stories found.

Advertisement

X
Kannada Prabha
www.kannadaprabha.com