ಕಲಬುರಗಿ: ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಬಂಧನ, 1.68 ಕೆಜಿ ಚಿನ್ನ ವಶ

ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗುರುವಾರ ಎಂಟು ಜನರನ್ನು ಬಂಧಿಸಿದ್ದು, ಅವರ ಬಳಿಯಿದ್ದ 1.68 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಎ ಶ್ರೀನಿವಾಸುಲು
ಎ ಶ್ರೀನಿವಾಸುಲು
Updated on: 

ಕಲಬುರಗಿ: ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗುರುವಾರ ಎಂಟು ಜನರನ್ನು ಬಂಧಿಸಿದ್ದು, ಅವರ ಬಳಿಯಿದ್ದ 1.68 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಎಎನ್‌ಐ ಜತೆ ಮಾತನಾಡಿದ ಉಪ ಪೊಲೀಸ್ ಆಯುಕ್ತ ಎ ಶ್ರೀನಿವಾಸುಲು, ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಆರೋಪಿಗಳನ್ನು ಬಂಧಿಸಿದ್ದೇವೆ ಮತ್ತು ಅವರಿಂದ 1.68 ಕೆಜಿ ಚಿನ್ನ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

"ನವೆಂಬರ್ 23 ರಂದು ಕೆಲವು ಅಪರಿಚಿತ ವ್ಯಕ್ತಿಗಳು ಚಿನ್ನದ ವ್ಯಾಪಾರಿಯ ಕೆಲಸಗಾರನ ಬಳಿ ಇದ್ದ ಚಿನ್ನ ದರೋಡೆ ಮಾಡಿದ್ದರು. ಈ ಸಂಬಂಧ ದೂರು ದಾಖಲಾದ ನಂತರ ನಾವು ಅವರನ್ನು ಬಂಧಿಸಿ ಅವರ ಬಳಿಯಿದ್ದ 1.68 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದೇವೆ" ಎಂದು ಅವರು ಹೇಳಿದರು.

ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಎ ಶ್ರೀನಿವಾಸುಲು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com