ಟೈರ್ ಸ್ಫೋಟಗೊಂಡು ಲಾರಿ ಪಲ್ಟಿ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ನಾಲ್ವರು ದುರ್ಮರಣ

ರಸ್ತೆ ಅಪಘಾತ ದುರಂತ ಮುಂದುವರಿದಿದೆ.ಕೋಟೆನಾಡು ಚಿತ್ರದುರ್ಗದಲ್ಲಿ ಸೋಮವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಆಲೂರು ಗ್ರಾಮದ ಹಿರಿಯೂರು ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟೈರ್ ಸ್ಫೋಟಗೊಂಡು ಲಾರಿ ಪಲ್ಟಿಯಾಗಿ ನಾಲ್ವರು ದುರ್ಮರಣಕ್ಕೀಡಾದ ಘಟನೆ ನಡೆದಿದೆ.
ಪಲ್ಟಿಯಾದ ಲಾರಿ
ಪಲ್ಟಿಯಾದ ಲಾರಿ
Updated on: 

ಚಿತ್ರದುರ್ಗ: ರಸ್ತೆ ಅಪಘಾತ ದುರಂತ ಮುಂದುವರಿದಿದೆ.ಕೋಟೆನಾಡು ಚಿತ್ರದುರ್ಗದಲ್ಲಿ ಸೋಮವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಆಲೂರು ಗ್ರಾಮದ ಹಿರಿಯೂರು ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟೈರ್ ಸ್ಫೋಟಗೊಂಡು ಲಾರಿ ಪಲ್ಟಿಯಾಗಿ ನಾಲ್ವರು ದುರ್ಮರಣಕ್ಕೀಡಾದ ಘಟನೆ ನಡೆದಿದೆ.

ಗದಗ ಜಿಲ್ಲೆ ಹುಯಿಲಗೋಳದಿಂದ ಬೆಂಗಳೂರಿಗೆ ಈರುಳ್ಳಿ ಸಾಗಣೆ ಮಾಡುತ್ತಿದ್ದ ಲಾರಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟೈರ್ ಸ್ಫೋಟಗೊಂಡ ಕಾರಣ ಪಲ್ಟಿಯಾಗಿದ್ದು ಲಾರಿಯಲ್ಲಿದ್ದ ಗದಗ ಮೂಲದ ಹನುಮಪ್ಪ(30), ಪ್ರಶಾಂತ(28), ಗುರಪ್ಪ(30), ರಮೇಶ(30) ಮೃತಪಟ್ಟಿದ್ದಾರೆ. 

ಲಾರಿ ಪಲ್ಟಿಯಾಗಿದ್ದರಿಂದ ಹಿಂಬದಿಯಿಂದ ಬರುತ್ತಿದ್ದ ಕಾರು, ಆರು ಲಾರಿ ಡಿಕ್ಕಿ ಹೊಡೆದು ಸರಣಿ ಅಪಘಾತವುಂಟಾಗಿ 10 ಮಂದಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಿರಿಯೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com