ಚಿಕ್ಕಮಗಳೂರಿನ ಪ್ರವಾಸಿ ಕೇಂದ್ರಗಳಿಗೆ ವಾರಾಂತ್ಯದಲ್ಲಿ ಪ್ರವೇಶವಿಲ್ಲ: ಜಿಲ್ಲಾಡಳಿತದ ಆದೇಶ

ಚಿಕ್ಕಮಗಳೂರು ಜಿಲ್ಲಾಡಳಿತ ಕೆಲವು ಪ್ರವಾಸಿ ತಾಣಗಳಿಗೆ ವಾರಾಂತ್ಯದಲ್ಲಿ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾಡಳಿತ ಕೆಲವು ಪ್ರವಾಸಿ ತಾಣಗಳಿಗೆ ವಾರಾಂತ್ಯದಲ್ಲಿ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದೆ. ಈ ಆದೇಶ ಡಿಸೆಂಬರ್ 16 ರ ಬೆಳಗ್ಗೆ 6 ಗಂಟೆಯಿಂದ ಡಿಸೆಂಬರ್ 20ರ ಬೆಳಗ್ಗೆ 6 ಗಂಟೆಯ ತನಕ ಜಾರಿಯಲ್ಲಿರುತ್ತದೆ.

ಚಿಕ್ಕಮಗಳೂರು ಜಿಲ್ಲಾಡಳಿತ ಸೋಮವಾರ ಈ ಕುರಿತು ಆದೇಶ ಹೊರಡಿಸಿದೆ. ಡಿಸೆಂಬರ್‌ 16 ರಿಂದ 20ರ ತನಕ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರ, ಹೊನ್ನಮ್ಮನಹಳ್ಳ ಮತ್ತು ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಸಂಸ್ಥೆ ಐ.ಡಿ ಪೀಠ ಭಾಗಗಳಿಗೆ ಯಾತ್ರಾರ್ಥಿಗಳು ಭೇಟಿ ನೀಡುವುದನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಹೇಳಿದೆ.

ಆದರೆ ಸದರಿ ದಿನಗಳಂದು ಪ್ರವಾಸಿಗರು ಇತರೆ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಯಾವುದೇ ನಿರ್ಬಂಧ ಇರುವುದಿಲ್ಲ. ಹೋಟೆಲ್, ಹೋಂ ಸ್ಟೇ ಮತ್ತು ರೆಸಾರ್ಟ್ ಗಳಲ್ಲಿ ಈಗಾಗಲೇ ವಾಸ್ತವ್ಯಕ್ಕೆ ಕಾಯ್ದಿರಿಸಿಕೊಂಡಿದ್ದಲ್ಲಿ ವಾಸ್ತವ್ಯ ಮಾಡಲು ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com