ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಮತ್ತು ಸೇನಾ ಹೆಲಿಕಾಪ್ಟರ್ ದುರಂತದ ಸಂಗ್ರಹ ಚಿತ್ರ
ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಮತ್ತು ಸೇನಾ ಹೆಲಿಕಾಪ್ಟರ್ ದುರಂತದ ಸಂಗ್ರಹ ಚಿತ್ರ

ಸೇನಾ ಹೆಲಿಕಾಪ್ಟರ್ ದುರಂತ: ಬದುಕುಳಿದಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ವಿಧಿವಶ; ಪ್ರಧಾನಿ ಸೇರಿ ಹಲವರು ಸಂತಾಪ

ತಮಿಳು ನಾಡಿನ ಕೂನ್ನೂರು ಬಳಿ ಕಳೆದ ಡಿಸೆಂಬರ್ 8ರಂದು ಸೇನಾ ಹೆಲಿಕಾಪ್ಟರ್ ದುರಂತದಲ್ಲಿ (TamilNadu military helicopter crash) ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬುಧವಾರ ವಿಧಿವಶರಾಗಿದ್ದಾರೆ.

ಬೆಂಗಳೂರು: ತಮಿಳು ನಾಡಿನ ಕೂನ್ನೂರು ಬಳಿ ಕಳೆದ ಡಿಸೆಂಬರ್ 8ರಂದು ಸೇನಾ ಹೆಲಿಕಾಪ್ಟರ್ ದುರಂತದಲ್ಲಿ (TamilNadu military helicopter crash) ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬುಧವಾರ ವಿಧಿವಶರಾಗಿದ್ದಾರೆ.ಭಾರತೀಯ ವಾಯುಪಡೆ ಅವರ ಸಾವನ್ನು ಖಚಿತಪಡಿಸಿದೆ. 

ಹೆಲಿಕಾಪ್ಟರ್ ದುರಂತದಲ್ಲಿ ಶರೀರದ ಬಹುತೇಕ ಭಾಗ ಸುಟ್ಟ ಗಾಯಗಳಾಗಿ ಪೈಲಟ್ ವರುಣ್ ಸಿಂಗ್ ಮಾತ್ರ ಬದುಕುಳಿದಿದ್ದರು. ಅವರಿಗೆ ಆರಂಭದಲ್ಲಿ ತಮಿಳು ನಾಡಿನ ವೆಲ್ಲಿಂಗ್ಟನ್ ನ ಕಮಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತಾದರೂ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಕಮಾಂಡ್ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನ ಹೊಂದಿದ್ದಾರೆ.

ಪ್ರಧಾನಿ ಸಂತಾಪ: ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ರಾಷ್ಟ್ರಕ್ಕೆ ಹೆಮ್ಮೆ, ಶೌರ್ಯ ಮತ್ತು ಅತ್ಯಂತ ವೃತ್ತಿಪರತೆಯೊಂದಿಗೆ ಸೇವೆ ಸಲ್ಲಿಸಿದರು. ಅವರ ನಿಧನದಿಂದ ನನಗೆ ಅತೀವ ನೋವಾಗಿದೆ. ದೇಶಕ್ಕೆ ಅವರ ಉತ್ಕೃಷ್ಟ ಸೇವೆ ಎಂದಿಗೂ ಮರೆಯಲಾಗದು. ಅವರ ಕುಟುಂಬ ಮತ್ತು ಸ್ನೇಹಿತರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ರಕ್ಷಣಾ ಪಡೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ 14 ಮಂದಿ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಕಳೆದ ವಾರ ತಮಿಳು ನಾಡಿನ ಕೂನ್ನೂರು ಬಳಿ ದುರಂತಕ್ಕೀಡಾಗಿ 13 ಮಂದಿ ಸಜೀವ ದಹನವಾಗಿದ್ದರು. ಇದೀಗ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಒಂದು ವಾರಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ನಡೆಸಿ ವಿಧಿವಶರಾಗಿದ್ದಾರೆ. 

Related Stories

No stories found.

Advertisement

X
Kannada Prabha
www.kannadaprabha.com