ಬೆಂಗಳೂರಿನ ತ್ಯಾಜ್ಯ ನಿರ್ವಹಣೆ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಸಭೆ

ಬೆಂಗಳೂರು ತ್ಯಾಜ್ಯ ನಿರ್ವಹಣೆಗೆ ಕುರಿತು ಚರ್ಚಿಸಲು ಶೀಘ್ರವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆಯೊಂದನ್ನು ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಬೆಂಗಳೂರು ತ್ಯಾಜ್ಯ ನಿರ್ವಹಣೆಗೆ ಕುರಿತು ಚರ್ಚಿಸಲು ಶೀಘ್ರವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆಯೊಂದನ್ನು ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ದೊಡ್ಡಬಳ್ಳಾಪುರ ಶಾಸಕ ಟಿ ವೆಂಕಟರಮಣಯ್ಯ, ಬೆಂಗಳೂರಿನ ತ್ಯಾಜ್ಯ ವಿಲೇವಾರಿ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಾಧುಸ್ವಾಮಿ, ಈ ವಿಚಾರದ ಬಗ್ಗೆ ಶೀಘ್ರದಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸಮಸ್ಯೆ ಬಗೆಹರಿಸಲಾಗುವುದು ಎಂದರು. 

ವೆಂಕಟರಮಣಯ್ಯ ಸರ್ಕಾರದ ಸಲಹೆಗಳಿಗೆ ಸಮ್ಮತಿಸಿದರೂ ಸ್ಥಳೀಯರು ತಾಳ್ಮೆ ಕಳೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಕೃಷ್ಣ ಬೈರೇಗೌಡ ಹೇಳಿದರು.  ನೆಲಮಂಗಲ ಮತ್ತು ದೊಡ್ಡಬಳ್ಳಾಪುರದ  ನಿವಾಸಿಗಳು ಘನತ್ಯಾಜ್ಯದಿಂದ ಕೊಳೆತ ಅಂತರ್ಜಲ, ಬೋರ್‌ವೆಲ್‌ಗಳು, ತೆರೆದ ಬಾವಿಗಳು ಮತ್ತು ಕೃಷಿ ಭೂಮಿ ಕಲುಷಿತಗೊಳಿಸುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಘನತ್ಯಾಜ್ಯವನ್ನು  ತೆರೆದ ಕ್ವಾರಿಗಳಲ್ಲಿ ಸುರಿಯುವುದು ಉತ್ತಮ ಪರಿಹಾರವಾಗಿದೆ ಎಂದು ಅವರು ಸಲಹೆ ನೀಡಿದರು. ಇದಕ್ಕೆ ಶಾಸಕ ಕೆ ಜೆ ಜಾರ್ಜ್ ಬೆಂಬಲ ಸೂಚಿಸಿದರು. 

 ಟ್ಯಾಂಕರ್‌ಗಳು ಗುಟ್ಟಾಗಿ ಅಪಾಯಕಾರಿ ತ್ಯಾಜ್ಯವನ್ನು ಸುರಿಯುತ್ತಿದ್ದು, ಇದರಿಂದ ಸಮಸ್ಯೆ ಹೆಚ್ಚುತ್ತಿದೆ ಎಂದು ಬಿಟಿಎಂ ಶಾಸಕ ರಾಮಲಿಂಗಾರೆಡ್ಡಿ ಸದನಕ್ಕೆ ತಿಳಿಸಿದರು. ಸಿಎಂ ಸದನಕ್ಕೆ ಹಾಜರಾಗದ ಕಾರಣ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸರ್ಕಾರದ ಪರವಾಗಿ ಪ್ರತಿಕ್ರಿಯೆ ನೀಡುವಂತೆ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ ಮನವಿ ಮಾಡಿದರು.

ಘನತ್ಯಾಜ್ಯ ಸುರಿಯುವ ಸ್ಥಳಕ್ಕೆ ಪ್ರತಿದಿನ ತಾನು ಭೇಟಿ ನೀಡುತ್ತಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ವೆಂಕಟರಮಣಯ್ಯ ಅವರನ್ನು ಕರೆದುಕೊಂಡು ಹೋಗಲು ಸಾಧ್ಯವಾಗುತ್ತಿಲ್ಲ ಎಂದು ಸಚಿವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com