ಕರ್ನಾಟಕ ಸರ್ಕಾರಿ ಶಾಲೆಗಳಲ್ಲಿ 53,700 ಶಿಕ್ಷಕರು, ಸಹಾಯಕ ಹುದ್ದೆಗಳು ಖಾಲಿ ಇವೆ: ಸಚಿವ ಬಿಸಿ ನಾಗೇಶ್
ಬೆಳಗಾವಿ: ಕರ್ನಾಟಕ ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶಿಕ್ಷಕರು ಸೇರಿದಂತೆ 53,700 ಸಿಬ್ಬಂದಿ ಹುದ್ದೆಗಳು ಖಾಲಿ ಇವೆ ಎಂದು ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಗುರುವಾರ ಹೇಳಿದ್ದಾರೆ.
ಬೈಲಹೊಂಗಲ ಶಾಸಕ ಕೌಜಲಗಿ ಮಹಾಂತೇಶ ಶಿವಾನಂದ್ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಚಿವ ನಾಗೇಶ್, ಪ್ರಾಥಮಿಕ ಶಾಲೆಗಳಲ್ಲಿ 41,869, ಪ್ರೌಢಶಾಲೆಗಳಲ್ಲಿ 8,292 ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ 3,292 ಹುದ್ದೆಗಳು ಖಾಲಿ ಇವೆ. ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳಲ್ಲಿ ಕ್ರಮವಾಗಿ 18,000 ಮತ್ತು 5,078 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಯಾವಾಗ ಮತ್ತು ಹೇಗೆ ಜಾರಿಗೆ ತರಲಾಗುವುದು ಎಂದು ಶಿವಾನಂದ್ ಕೇಳಿದಾಗ ಉತ್ತರಿಸಿದ ಸಚಿವರು, 'ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ತರಲು NEPಯನ್ನು ಕೇಂದ್ರ ಸರ್ಕಾರವು ಪರಿಚಯಿಸಿದೆ, ಮುಖ್ಯವಾಗಿ ಅದನ್ನು ಹೆಚ್ಚು ಪ್ರಾಯೋಗಿಕವಾಗಿ ಮಾಡುವ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದೆ. ಮಾಜಿ ಮುಖ್ಯ ಕಾರ್ಯದರ್ಶಿ ಎಸ್ ವಿ ರಂಗನಾಥ್ ನೇತೃತ್ವದ 15 ಸದಸ್ಯರ ಕಾರ್ಯಪಡೆಯ ಶಿಫಾರಸಿನ ಮೇರೆಗೆ ಎನ್‌ಇಪಿಯನ್ನು ಜಾರಿಗೊಳಿಸಲಾಗಿದೆ. ಸರ್ಕಾರವು ಹಂತಗಳಲ್ಲಿ ಎನ್‌ಇಪಿಯನ್ನು ಪರಿಚಯಿಸುತ್ತಿದೆ ಎಂದು ನಾಗೇಶ್ ಅವರು ಸದನಕ್ಕೆ ತಿಳಿಸಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ